Popular Posts

ಅನುದಾನಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘಕ್ಕೆ ಸಿದ್ರಾಮ ನಿಜಾಂಪುರ ಜಿಲ್ಲಾಧ್ಯಕ್ಷ

ಬೀದರ್: ಜಿಲ್ಲಾ ಅನುದಾನಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ನೂತನ ಅಧ್ಯಕ್ಷರಾಗಿ ತಾಲ್ಲೂಕಿನ ಕೊಳಾರ(ಕೆ) ಗ್ರಾಮದ ರಾಮಸ್ವಾಮಿ ಪೇರಿಯಾರ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿದ್ರಾಮ ಜೆ. ನಿಜಾಂಪುರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೀದರ್‍ನ ಅಲ್ ಅಮೀನ್ ಬಾಲಕರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಂ.ಡಿ. ಮುಕ್ರಂ ಆಯ್ಕೆಯಾಗಿದ್ದಾರೆ.
ನಗರದ ಅಲ್ ಅಮೀನ್ ಬಾಲಕರ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಸಂಘದ ಚುನಾವಣೆಯಲ್ಲಿ ಅವರು ಆಯ್ಕೆಯಾದರು.
ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಅನುದಾನಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಸಿದ್ರಾಮ ನಿಜಾಂಪುರ ಹೇಳಿದರು.
ಸಂಘವು ಮುಖ್ಯೋಪಾಧ್ಯಾಯರ ಹಿತ ರಕ್ಷಣೆಗೆ ಪೂರಕವಾಗಿ ಕಾರ್ಯ ನಿರ್ವಹಿಸಲಿದೆ. ಮುಖ್ಯೋಪಾಧ್ಯಾಯರ ಏನೇ ಸಮಸ್ಯೆಗಳಿದ್ದರೂ ಸಂಘದ ಗಮನಕ್ಕೆ ತರಬೇಕು ಎಂದು ತಿಳಿಸಿದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading