Popular Posts

ಔರಾದ–ಕಮಲನಗರ ಶಾಲೆಗಳ ಅನುದಾನದಲ್ಲಿ 1.52 ಕೋಟಿ ರೂ. ಭ್ರಷ್ಟಾಚಾರ ಆರೋಪ – ತನಿಖೆಗೆ ಒತ್ತಾಯ

ಬೀದರ್:ಬೀದರ್ ಜಿಲ್ಲೆಯ ಔರಾದ ಹಾಗೂ ಕಮಲನಗರ ತಾಲೂಕುಗಳ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಏಏಖಆಃ) ಮೂಲಕ ಮಂಜೂರಾದ ಕೋಟ್ಯಾಂತರ ರೂಪಾಯಿಗಳ ಅನುದಾನದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಯುವ ಕ್ರಾಂತಿ ಸಂಘಟನೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಶಾಲೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಉದ್ದೇಶದಿಂದ 49 ಶಾಲೆಗಳಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಸಲು ಸುಮಾರು 1.52 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಪ್ರತಿ ಶಾಲೆಗೆ 4 ರಿಂದ 5 ಲಕ್ಷ ರೂ. ಅನುದಾನ ಮೀಸಲಿಡಲಾಗಿದ್ದರೂ, ಐದಾರು ಶಾಲೆಗಳಲ್ಲಿ ಮಾತ್ರ ಅಳವಡಿಕೆ ನಡೆದಿದೆ ಎಂದು ಸಂಘಟನೆ ತಿಳಿಸಿದೆ. ಅಳವಡಿಸಿದ ಸೋಲಾರ್ ಪ್ಯಾನೆಲ್‌ಗಳ ಗುಣಮಟ್ಟವೂ ಕಳಪೆಯಾಗಿದೆ ಎಂದು ಆರೋಪಿಸಲಾಗಿದೆ.

2023–24 ಮತ್ತು 2025–26 ಸಾಲಿನ ಅನುದಾನದಲ್ಲಿ ಅಕ್ರಮ ನಡೆದಿದೆ. ಏಖIಆಐ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೈಜೋಡಿಸಿ, 2025ರ ಫೆಬ್ರವರಿಯಲ್ಲೇ ಕಾಮಗಾರಿ ಪೂರ್ಣಗೊಂಡಿದೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕುಮೇಲೆ ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿ ಹೆಸರಲ್ಲಿಯೂ ಕೋಟಿ ಕೋಟಿ ರೂ. ದುರುಪಯೋಗ ನಡೆದಿದೆ ಎಂದು ಯುವ ಕ್ರಾಂತಿ ಸಂಘಟನೆ ದೂರಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಏಏಖಆಃ ಹಾಗೂ ಪಂಚಾಯತ್ ರಾಜ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು ಮತ್ತು ಸರ್ಕಾರಕ್ಕೆ ಉಂಟಾದ ನಷ್ಟವನ್ನು ವಸೂಲಿ ಮಾಡಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಒಂದು ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಏಖIಆಐ ಕಚೇರಿ ಎದುರು ಆಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಯುವ ಕ್ರಾಂತಿ ಸಂಘಟನೆ ಜಿಲ್ಲಾಧ್ಯಕ್ಷ ಶ್ರೀ ಸಂಗಮೇಶ ಭೂರೆ, ತಾಲೂಕು ಅಧ್ಯಕ್ಷ ಮೇತ್ರೆ ಸಿದ್ರಾಮ, ಹಾಗೂ ಸದಸ್ಯರಾದ ರಾಕೇಶ್ ಚೌದರಿ, ಕ್ರಿಸ್ಟೊಫರ್, ನರಸಿಂಗ, ಯೇಸು, ಸಂಗಮೇಶ, ಅನಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading