ಬೀದರ, ಏಪ್ರಿಲ್.9 (ಕಕ ):- ಬೀದರ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಮುಂಜಾಗ್ರತೆವಹಿಸಬೇಕು. ಬೇಸಿಗೆ ಇರುವುದರಿಂದ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಿವೆ ಎಂಬ ದೂರುಗಳು ಬರದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಅರಣ್ಯ. ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಹೇಳಿದರು.
ಅವರು ಗುರುವಾರ ಬೀದರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಏಪ್ರಿಲ್. 11 ರಂದು ಬೀದರ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆ ಮತ್ತು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಪ್ರಿಲ್. 11 ರಂದು ಬೀದರಗೆ ಬರುತ್ತಿದ್ದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿರುವ 40 ನೇ ರಾಜ್ಯ ಪತ್ರಕರ್ತರ ಸಮ್ಮೆಳನದ ಉದ್ಘಾಟನೆಗೆ ಆಗಮಿಸುತ್ತಿದ್ದು. ಜಿಲ್ಲೆಯ ತುರ್ತಾಗಿರುವ ಸಮಸ್ಯೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಾಡಲು ತಿಳಿಸಿದ್ದು. ಬೇಸಿಗೆ ಇರುವುದರಿಂದ ಜಿಲ್ಲೆಯ ಜಾನುವಾರುಗಳಿಗೆ, ತಾಂಡಾ, ಜನವಸತಿ ಪ್ರದೇಶ ಸೇರಿದಂತೆ ಇತರೆ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ನೀರಿನ ಸಮಸ್ಯೆಗಳಿದ್ದರೆ ದಿನದ 24 ಗಂಟೆಗಳಲ್ಲಿ ಸಂಬAಧಿಸಿದ ಇಲಾಖೆಯವರು ಪರಿಹಾರ ಒದಗಿಸಬೇಕು ಎಂದರು.
ಗ್ರಾಮ ಪಂಚಾಯತಿ ಹಂತದಲ್ಲಿ ಪಿ.ಡಿ.ಓ ಗಳು. ತಾಲ್ಲೂಕು ಹಂತದಲ್ಲಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ನೀರಿನ ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತರಬೇಕು. ಮೇ ಮತ್ತು ಜೂನ್. ಇನ್ನೂ 2 ತಿಂಗಳು ಜಿಲ್ಲೆಯ ಯಾವುದೇ ಭಾಗದಲ್ಲಿ ನೀರಿನ ಸಮಸ್ಯೆಗಳಾಗಬಾರದು. ಕುಡಿಯುವ ನೀರಿನ ಯಾವುದೇ ಬಿಲ್ಲಗಳು ಪೆಂಡಿAಗ್ ಇದ್ದರೆ ತಕ್ಷಣ ಅವುಗಳನ್ನು ಕ್ಲೀಯರ್ ಮಾಡಬೇಕೆಂದರು.
ಜಿಲ್ಲೆಯ ಆಯಾ ತಾಲ್ಲೂಕಿನ ತಹಶಿಲ್ದಾರರು. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಟಾಸ್ಕಫೊರ್ಸ ಸಮಿತಿ ಸಭೆ ನಡೆಸಿ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳಿವೆ, ಏನು ಕ್ರಮ ವಹಿಸಬೇಕೆಂಬುದರ ಕುರಿತು ಚರ್ಚಿಸಬೇಕು. ಔರಾದ, ಭಾಲ್ಕಿ, ಹುಮನಾಬಾದ, ಬಸವಕಲ್ಯಾಣ ಸೇರಿದಂತೆ ಎಲ್ಲಾ ತಾಲೂಕಿನ ತಹಶಿಲ್ದಾರರು. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಿಡಿಓ ಗಳು ಈ ಕುರಿತು ಮುಂಜಾಗ್ರತೆವಹಿಸಬೇಕು. ಬಡಾವಣೆಗೆ ಬಿಡುವ ನೀರು ಪರೀಕ್ಷಿಸಿ. ಓವರ್ ಹೆಡ್ ಟ್ಯಾಂಕಗಳನ್ನು ಸ್ವಚ್ಚಗೊಳಿಸಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ಗ್ಯಾಸ್ ಸಮಸ್ಯೆಗಳಿವೆಯೆ ಎಲ್ಲಿಯೂ ಗ್ಯಾಸಗಳನ್ನು ಬ್ಲಾಕಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೆಕೆಂದು ಸಚಿವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೀದರ ನಗರದಲ್ಲಿ ರಾಜ್ಯ ಮಟ್ಟದ ಪರ್ತಕರ್ತರ ದೊಡ್ಡ ಕಾರ್ಯಕ್ರಮ ನಡೆಯುತ್ತಿರುವುದರಿಂದ ನಗರ ಸ್ವಚ್ಚತೆ ಮಾಡುವುದರ ಜೊತೆಗೆ ಎಲ್ಲೂ ಪ್ಲಾಸ್ಟಿಕ್ ಕವರಗಳು ಕಾಣಬಾರದು ಕಾರ್ಯಕ್ರಮಕ್ಕೆ ಬರುವ ಜನರಿಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕೆಂದು ಹೇಳಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆ ಆಯುಕ್ತರಾದ ಮುಕುಲ್ ಜೈನ್, ಬೀದರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಸಹಾಯಕ ಆಯುಕ್ತರು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ತಹಸೀಲ್ದಾರ, ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Discover more from ಕಲಿಯುಗದ ಕೂಗು
Subscribe to get the latest posts sent to your email.