Popular Posts

ಕೆಪಿ ವಿದ್ಯಾ ಸಂಸ್ಥೆಯ 47ನೇ ವಾರ್ಷಿಕ ಸ್ನೇಹ ಸಮ್ಮೇಳನ

ಕೆಪಿ ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕನ್ಯಕಾ ಪರಮೇಶ್ವರಿ ಪ್ರಾಥಮಿಕ ಪ್ರೌಢ ಶಾಲೆಯ 47ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಸಾಂಸ್ಕøತಿಕ ಉತ್ಸವ 2026 ಡಾ. ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಅದ್ದೂರಿಯಾಗಿ ಜರುಗಿತ್ತು.
ಸಂಸ್ಥೆಯ ಅಧ್ಯಕ್ಷರಾದ ಬಾಬುವಾಲಿ ಅಧ್ಯಕ್ಷತೆಯಲ್ಲಿ ಜರುಗಿದ ಈ ಕಾರ್ಯಕ್ರಮದ ದಿವ್ಯಾ ಸಾನಿಧ್ಯವನ್ನು ವಹಿಸಿದ ಭಾಲ್ಕಿಯ ಹಿರೇಮಠ ಸಂಸ್ಥಾನದ ಪರಮ ಪೂಜ್ಯ ಗುರುಬಸವ ಪಟ್ಟದೇವರ ಉಪಸ್ಥಿತಿಯಲ್ಲಿ ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಒಂದು ಕಾಲದಲ್ಲಿ ಅತೀ ಚಿಕ್ಕ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದ ಈ ಶಿಕ್ಷಣ ಸಂಸ್ಥೆ ಇಂದು ಸ್ವಂತ ಕಟ್ಟಡ ಹೊಂದಿ ಹೆಮ್ಮರವಾಗಿ ಬೆಳೆದಿದೆ. ಇದರ ಶ್ರೇಯಸ್ಸು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಾಬು ವಾಲಿ ಅವರಿಗೆ ಸಲ್ಲುತ್ತದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಬೀದರ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಉದ್ಘಾಟನಾ ನುಡಿ ನುಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಮಾತನಾಡಿ 26 ದೇಶಗಳ ಎಐ ಶೃಂಗಸಭೆ ಭಾರತದಲ್ಲಿ ಜರುಗಿದ್ದು ಈ ಸಭೆಯಲ್ಲಿ 4 ಎಐ ಇಂಜಿನಿಯರ್‍ಗಳ ಪೈಕಿ 3ವರು ಬೆಂಗಳೂರಿನವರಾಗಿದ್ದು, ಇದು ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವಗುರುವಾಗುವಲ್ಲಿ ಯಾವುದೇ ಸಂದೇಹವಿಲ್ಲ. ಬಡ ವಿದ್ಯಾರ್ಥಿಗಳ ಶಿಕ್ಷಣ ಸಂಸ್ಥೆ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಈ ಸಂಧರ್ಭದಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಆನಂದ ದೇವಪ್ಪ, ಚನ್ನಬಸವ ಪಟ್ಟದೇವರ ಪತ್ತಿನ ಸಹಕಾರ ಸಂಘ ನಿ. ಬ್ಯಾಂಕಿನ ಅಧ್ಯಕ್ಷರಾದ ಜಯರಾಜ ಖಂಡ್ರೆ, ಕೆಪಿ ವಿದ್ಯಾ ಸಂಸ್ಥೆಯ ಗೌರವ ಸದಸ್ಯರಾದ ಸಂಗಶೆಟ್ಟಿ ಹಲಬರ್ಗೆ, ಚಂದ್ರಶೇಖರ ಪಾಟೀಲ, ಪ್ರಭುಶೆಟ್ಟಿ ಬುಳ್ಳಾ, ಕ್ಷತೀಯ ಯರೋಳಕರ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತವನ್ನು ಕನ್ಯಾಕ ಪರಮೇಶ್ವರಿ ಪ್ರಾಥಮಿಕ ಪ್ರೌಢ ಶಾಲೆಯ ಮುಖ್ಯಗುರುಗಳಾದ ವಿಜಯಕುಮಾರ ಪಾಟೀಲ ಯರನಳ್ಳಿ, ನಿರೂಪಣೆಯನ್ನು ಸಹ ಶಿಕ್ಷಕರಾದ ನಾಮದೇವ್ ಶರ್ಮಾ ನಡೆಸಿಕೊಟ್ಟರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading