1
1

ಗೊಂಡ ಮಿತ್ರ ಮಂಡಳಿ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆದಿವಾಸಿ ಸಮುದಾಯಗಳು ಐಕ್ಯತೆಯಿಂದ ಸಂಘಟಿತರಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಹಿರಿಯ ಸಾಹಿತಿ ಮಾಣಿಕ ನೇಳಗಿ ಅವರು ವಿಶೇಷ ಉಪನ್ಯಾಸ ನೀಡಿ, ಬಿರ್ಸಾ ಮುಂಡಾ ಅವರು ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾಗಿದ್ದು, ಆದಿವಾಸಿಗಳ ಹಕ್ಕುಗಳಿಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾಯಕ ಎಂದು ಬಣ್ಣಿಸಿದರು. ‘ಜಲ, ಜಂಗಲ್, ಜಮೀನ್’ ಆದಿವಾಸಿಗಳ ಹಕ್ಕು ಎಂಬುದನ್ನು ಪ್ರತಿಪಾದಿಸಿ, ತಮ್ಮ ಸಮುದಾಯವನ್ನು ಸಂಘಟಿಸಿ ಹೋರಾಟ ನಡೆಸಿದ್ದರು ಎಂದರು.
ಬೀದರ ಜಿಲ್ಲೆಯಲ್ಲಿ ಗೊಂಡ, ಟೋಕರೆ ಕೋಳಿ ಸೇರಿದಂತೆ ವಿವಿಧ ಬುಡಕಟ್ಟು ಸಮುದಾಯಗಳ ಜನಸಂಖ್ಯೆ ಹೆಚ್ಚಿದೆ. ಹೀಗಾಗಿ ಬೀದರ ವಿಶ್ವವಿದ್ಯಾಲಯದಲ್ಲಿ ಬುಡಕಟ್ಟು ಸಮುದಾಯಗಳ ಅಧ್ಯಯನ ಪೀಠ ಸ್ಥಾಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮುದಾಯದ ಮುಖಂಡರು ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸಲಹೆ ನೀಡಿದರು.
ಆದಿವಾಸಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಡುಮ್ಮೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿವಿಧ ಕಾರ್ಯಕ್ರಮಗಳ ಮೂಲಕ ಆದಿವಾಸಿ ಸಮುದಾಯಗಳಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಪರಿಷತ್ತು ನಿರಂತರವಾಗಿ ಮಾಡುತ್ತಿದೆ. ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಬಿರ್ಸಾ ಮುಂಡಾ, ಬೊಮ್ಮಗೊಂಡ ಹಾಗೂ ವಾಲ್ಮೀಕಿ ಅವರ ಸಂದೇಶಗಳನ್ನು ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗನ್ನಾಥ ಮೇತ್ರೆ ವಹಿಸಿದ್ದರು. ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ, ಈಶ್ವರ ಮಲಕಾಪೂರೆ, ಚಂದ್ರಕಲಾ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿದ್ದರು.
Subscribe to get the latest posts sent to your email.