Popular Posts

ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು

T20 World Cup 2026: ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ 2026ರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ 197 ರನ್ ಗುರಿ ನೀಡಿದ ವಿಂಡೀಸ್, ತನ್ನ ಸ್ಪಿನ್ನರ್‌ಗಳ ಬಲದಿಂದ ಇಂಗ್ಲೆಂಡ್‌ ಅನ್ನು 166 ರನ್‌ಗಳಿಗೆ ಆಲೌಟ್ ಮಾಡಿತು. 10 ವರ್ಷಗಳ ನಂತರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ವಿಂಡೀಸ್ ತನ್ನ ಅಜೇಯ ಓಟವನ್ನು ಮುಂದುವರಿಸಿದೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ತನ್ನ ಅಜೇಯ ಓಟವನ್ನು ಮುಂದುವರಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯ 15 ನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ (England vs West Indies) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವಿಂಡೀಸ್ ಶೆರ್ಫೇನ್ ರುದರ್ಫೋರ್ಡ್ ಅವರ ಸ್ಫೋಟಕ ಇನ್ನಿಂಗ್ಸ್ ಬಲದಿಂದ ಇಂಗ್ಲೆಂಡ್‌ಗೆ 197 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್, ವಿಂಡೀಸ್ ಸ್ಪಿನ್ನರ್‌ಗಳ ಬಲೆಗೆ ಸಿಲುಕಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ ಆಲೌಟ್ ಆಯಿತು. ಅಂತಿಮವಾಗಿ ಇಂಗ್ಲೆಂಡ್‌ನ ಇನ್ನಿಂಗ್ಸ್ 19 ಓವರ್‌ಗಳಲ್ಲಿ 166 ರನ್‌ಗಳಿಗೆ ಕೊನೆಗೊಂಡಿತು. ಇದರೊಂದಿಗೆ ವೆಸ್ಟ್ ಇಂಡೀಸ್ 10 ವರ್ಷಗಳ ನಂತರ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಸಾಧನೆ ಮಾಡಿತು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading