Popular Posts

ಫೆಬ್ರವರಿ ೧೭ ರಂದು ಕಲಬುರಗಿ ಜಿಲ್ಲಾ ೨೨ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ

ಕಲಬುರಗಿ,ಫೆಬ್ರವರಿ.೧೬.-ಕಲಬುರಗಿ ಜಿಲ್ಲಾ ೨೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭವು ಫೆಬ್ರವರಿ ೧೭ ರಂದು ಮಂಗಳವಾರ ಸಂಜೆ ೫.೧೫ ಗಂಟೆಗೆ ಕಲಬುರಗಿಯ ನಗರದ ಭಾಪೂಗೌಡ ದರ್ಶನಾಪುರ ರಂಗಮAದಿರದ ಕನ್ನಡ ಭವನದಲ್ಲಿ ಜರುಗಲಿದೆ.

ಕಲಬುರಗಿ ಕಡಗಂಚಿ ಶ್ರೀ ಶಾಂತಲಿAಗೇಶ್ವರ ಮಠದ ಪೂಜ್ಯ ಷ.ಬ್ರ. ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸುವರು. ಸಂಸ್ಕೃತಿ ಚಿಂತಕರಾದ ಡಾ. ಭುವನೇಶ್ವರಿ ಚಿಮಕೋಡ ಸಮಾರೋಪ ನುಡಿಗಳನ್ನಾಡುವರು. ಸಮ್ಮೇಳನಾಧ್ಯಕ್ಷರಾದ ಮುಡುಬಿ ಗುಂಡೇರಾವ್ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ವೀರಭದ್ರ ಸಿಂಪಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮಾಜಿ ಸಚಿವರಾದ ಮಾಲೀಕಯ್ಯ ವ್ಹಿ. ಗುತ್ತೇದಾರ್, ಮಾಜಿ ಜಿ.ಪಂ. ಅಧ್ಯಕ್ಷ ನಿತೀನ್ ವ್ಹಿ.ಗುತ್ತೇದಾರ್, ಮಾಜಿ ಶಾಸಕರುಗಳಾದ ಸುಭಾಷ ಆರ್. ಗುತ್ತೇದಾರ್, ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ್, ಡೊಡ್ಡಪ್ಪಗೌಡ ಪಾಟೀಲ ನರಿಬೋಳ, ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಂಕ್ರೆಮ್ಮ ಢವಳಗಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳ್ಳುಂಡಗಿ, ಸೇರಿದಂತೆ ಮತ್ತಿತರ ಗಣ್ಯರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳುವರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading