Popular Posts

ಬೀದರ್ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ ಆದ್ಯತೆ – ಬಿ.ಎಲ್. ಸಂತೋಷ್

ಬೀದರ್/ನವದೆಹಲಿ : ಬೀದರ್ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಸನ್ಮಾನ್ಯ ಶ್ರೀ ಬಿ.ಎಲ್. ಸಂತೋಷ್ ಜೀ ಅವರನ್ನು ಬಿಜೆಪಿ ಬೀದರ್ ಜಿಲ್ಲಾ ಅಧ್ಯಕ್ಷರಾದ ಶ್ರೀ ಸೋಮನಾಥ್ ಪಾಟೀಲ್ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ನವದೆಹಲಿಯ ರಾಷ್ಟ್ರೀಯ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಬೀದರ್ ಜಿಲ್ಲೆಯ ಪ್ರಸ್ತುತ ಪಕ್ಷದ ಸಂಘಟನಾ ಪರಿಸ್ಥಿತಿ, ಮಂಡಲ ಹಾಗೂ ಬೂತ್ ಮಟ್ಟದ ಸಂಘಟನಾ ಚಟುವಟಿಕೆಗಳು, ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆ, ಜನಸಂಪರ್ಕ ಅಭಿಯಾನಗಳು ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಸಂಘಟನಾ ಕಾರ್ಯತಂತ್ರಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಜಿಲ್ಲೆಯ ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಪ್ರಸ್ತಾಪಿಸಿ, ಕ್ಷೇತ್ರದಲ್ಲಿ ನಡೆಯುತ್ತಿರುವ ಸಂಘಟನಾ ಚಟುವಟಿಕೆಗಳು ಹಾಗೂ ಕಾರ್ಯಕರ್ತರೊಂದಿಗೆ ನಿರಂತರವಾಗಿ ನಡೆಸುತ್ತಿರುವ ಸಂಪರ್ಕದ ಕುರಿತು ಮಾಹಿತಿ ಹಂಚಿಕೊಂಡರು.
ಜಿಲ್ಲೆಯಾದ್ಯಂತ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು, ಪ್ರತಿಯೊಂದು ಬೂತ್‌ನಲ್ಲಿಯೂ ಸಂಘಟನೆಯನ್ನು ಚುರುಕುಗೊಳಿಸುವುದು ಹಾಗೂ ಪಕ್ಷದ ಕಾರ್ಯಕರ್ತರನ್ನು ನಿರಂತರವಾಗಿ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಕುರಿತು ಮತ್ತು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಯ ತಯಾರಿ ಕುರಿತು ಸಭೆಯಲ್ಲಿ  ತಿಳಿಸಿದರು.
ಬೂತ್ ಮಟ್ಟವೇ ಪಕ್ಷದ ಸಂಘಟನೆಯ ಮೂಲಾಧಾರವಾಗಿದ್ದು, ಪ್ರತಿಯೊಂದು ಬೂತ್‌ನಲ್ಲಿಯೂ ಪಕ್ಷದ ಕಾರ್ಯಕರ್ತರ ತಂಡವನ್ನು ಮತ್ತಷ್ಟು ಸಕ್ರಿಯಗೊಳಿಸುವುದು, ಶಕ್ತಿಕೇಂದ್ರ ಹಾಗೂ ಮಂಡಲ ಮಟ್ಟದ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಮನ್ವಯಗೊಳಿಸುವುದು ಹಾಗೂ ಜನರೊಂದಿಗೆ ನಿರಂತರ ಸಂಪರ್ಕ ಹೊಂದುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕುರಿತು ಮುಖಂಡರಿಗೆ ಮಾರ್ಗದರ್ಶನ ನೀಡಿದರು.
ಇದೇ ವೇಳೆ ಯುವಕರು, ಮಹಿಳೆಯರು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರನ್ನು ಪಕ್ಷದ ಸಂಘಟನೆಯೊಂದಿಗೆ ಸಂಪರ್ಕಿಸುವುದು, ಹೊಸ ಕಾರ್ಯಕರ್ತರನ್ನು ಗುರುತಿಸಿ ಸಂಘಟನಾ ಜವಾಬ್ದಾರಿಗಳನ್ನು ನೀಡುವುದು ಹಾಗೂ ಈಗಾಗಲೇ ಪಕ್ಷಕ್ಕಾಗಿ ಶ್ರಮಿಸುತ್ತಿರುವ ಹಿರಿಯ ಮತ್ತು ನಿಷ್ಠಾವಂತ ಕಾರ್ಯಕರ್ತರ ಅನುಭವವನ್ನು ಸಂಘಟನೆಯ ಬಲವರ್ಧನೆಗೆ ಬಳಸಿಕೊಳ್ಳುವ ಕುರಿತು ಚರ್ಚೆ ನಡೆಯಿತು.
ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಜನರಿಗೆ ಮಾಹಿತಿ ತಲುಪಿಸುವುದು, ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸುವುದು ಹಾಗೂ ಜನರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸ್ಪಂದಿಸುವ ಮೂಲಕ ಪಕ್ಷದ ಜನಸಂಪರ್ಕವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸುವ ಕುರಿತು ಕೂಡ ಸಮಾಲೋಚನೆ ನಡೆಯಿತು.
ಪಕ್ಷದ ಸಂಘಟನೆಯ ಬೆಳವಣಿಗೆಯಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕಾರ್ಯಕರ್ತರ ಪರಿಶ್ರಮ, ಸಮರ್ಪಣೆ ಮತ್ತು ನಿರಂತರ ಜನಸಂಪರ್ಕವೇ ಪಕ್ಷದ ನಿಜವಾದ ಶಕ್ತಿಯಾಗಿದ್ದು, ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವ ಮೂಲಕವೇ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಸಾಧ್ಯ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಬೀದರ್ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಸಂಘಟಿತ ಹಾಗೂ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮಂಡಲ, ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದಲ್ಲಿ ಸಂಘಟನಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಖಂಡರು ಸಂಕಲ್ಪಿಸಿದರು.
ತಳಮಟ್ಟದ ಬಲಿಷ್ಠ ಸಂಘಟನೆಯೊಂದಿಗೆ ಬೀದರ್ ಜಿಲ್ಲೆಯಲ್ಲಿ ಬಿಜೆಪಿಯನ್ನು ಮತ್ತಷ್ಟು ಸದೃಢಗೊಳಿಸುವ ಸಂಕಲ್ಪದೊಂದಿಗೆ ಮುನ್ನಡೆಯಲಾಗುವುದು ಎಂದು ಒಮ್ಮತ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಪ್ರಭು ಬಿ. ಚವ್ಹಾಣ್, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಶ್ರೀ ಶರಣು ಸಲಗರ, ಶ್ರೀ ಸಿದ್ದು ಪಾಟೀಲ್, ವಿಧಾನ ಪರಿಷತ್ ಮಾಜಿ ಸಭಾಪತಿ ಶ್ರೀ ರಘುನಾಥರಾವ ಮಲ್ಕಾಪುರೆ,
ಮಾಜಿ ಶಾಸಕರಾದ ಶ್ರೀ ಪ್ರಕಾಶ ಖಂಡ್ರೆ, ಬೀದರ್ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪೀರಪ್ಪ ಯರನಳ್ಳಿ, ಶ್ರೀ ಕಿರಣ್ ಪಾಟೀಲ್ ಹಾಗೂ ಪಕ್ಷದ ಮುಖಂಡರಾದ ಶ್ರೀ ಈಶ್ವರ್ ಸಿಂಗ್ ಠಾಕೂರ್, ಶ್ರೀ ಬಾಬು ವಾಲಿ, ಶ್ರೀ ಬಾಬುರಾವ ಕಾರಬಾರಿ, ಶ್ರೀ ಬಸವರಾಜ ಆರ್ಯ ಇದ್ದರು.
ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ ಸಹಾಯಕ ನಾಗೇಶ ಸಿದ್ದಾ.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading