Popular Posts

ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ವಿಜಯಲಕ್ಷ್ಮಿ ಕೌಟಗೆ

ಬೀದರ್: ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಜಿಲ್ಲೆಯ ಪ್ರತಿ ಮನೆ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮಿ ಕೌಟಗೆ ಮನವಿ ಮಾಡಿದ್ದಾರೆ.
ತ್ರಿವರ್ಣ ಧ್ವಜ ಕೇವಲ ಧ್ವಜವಷ್ಟೇ ಅಲ್ಲ; ದೇಶದ ಜನರ ಹೃದಯ ಬಡಿತವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಭಿಯಾನದ ಭಾಗವಾಗಬೇಕು ಎಂದು ಹೇಳಿದ್ದಾರೆ.
ಧ್ವಜ ಸಂಹಿತೆಯನ್ನು ಚಾಚೂತಪ್ಪದೇ ಪಾಲಿಸಬೇಕು. ಧ್ವಜದ ಗೌರವಕ್ಕೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು. ಧ್ವಜ ಹಾರಿಸಿದವರು ಧ್ವಜದೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ವೆಬ್‍ಸೈಟ್ ವಿಳಾಸ harghartiranga.com ನಲ್ಲಿ ಅಪ್‍ಲೋಡ್ ಮಾಡಬೇಕು ಎಂದು ತಿಳಿಸಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading

Subscribe