Popular Posts

ಸ್ವಚ್ಛತೆ, ಪರಿಸರ ಸಂರಕ್ಷಣೆ ಕುರಿತು ಮಕ್ಕಳಿಗೆ ಜಾಗೃತಿ

ಬೀದರ್,  ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಹಾಗೂ ಮೇರಾ ಯುವ ಭಾರತ್ ಬೀದರ್, ಸ್ವಾಮಿ ವಿವೇಕಾನಂದ ಕಪಲಾಪುರ ಎ ವತಿಯಿಂದ ಎಪಿಜೆ ಅಬ್ದುಲ್ ಕಲಾಂ ಶಾಲೆಯಲ್ಲಿ ‘ಸ್ವಚ್ಛತಾ ಪಕ್ವಾಡ್–2026’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವಚ್ಛತೆಯ ಮಹತ್ವ, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದ ಕುರಿತು ಅರಿವು ಮೂಡಿಸಲಾಯಿತು. ಸ್ವಚ್ಛತೆ ಕೇವಲ ವೈಯಕ್ತಿಕ ಜವಾಬ್ದಾರಿಯಲ್ಲ, ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮನೆ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ ಎಂದು ಮಕ್ಕಳಿಗೆ ತಿಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗಾಗಿ ಪ್ರಬಂಧ ಹಾಗೂ ಟ್ರಾಯಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಬಗ್ಗೆ ಜವಾಬ್ದಾರಿ ಮತ್ತು ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಪ್ರಯತ್ನ ನಡೆಯಿತು. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಅವರು ತಮ್ಮ ಕುಟುಂಬ ಹಾಗೂ ಸಮುದಾಯದಲ್ಲಿಯೂ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಸಂದೇಶವನ್ನು ಹರಡಲು ಸಾಧ್ಯವಾಗುತ್ತದೆ ಎಂದು ಆಯೋಜಕರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ನಿಖಿಲ್ ಕೊಕ್ಕುಲಾ, ಸ್ವಾಮಿ ವಿವೇಕಾನಂದ ಸಂಸ್ಥೆಯ ಅಧ್ಯಕ್ಷ ಟಿ.ಕೆ.ಪಿ.ಎಸ್., ನಿರ್ದೇಶಕ ಇಮ್ರಾನ್ ಖಾನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲ್ಮನಿ, ಮುಖಂಡರಾದ ಬಸವರಾಜ ಬಿರಾದಾರ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಧನರಾಜ್ ಖೇಮಶೆಟ್ಟಿ, ಪಿಕೆಪಿಎಸ್ ನಿರ್ದೇಶಕ ಶಂಕರರಾವ್ ಜಾಂತಿ, ಶಾಲೆಯ ಮುಖ್ಯಗುರು ಆನಂದ್, ಅಜಯ್ ಕುಲಕರ್ಣಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಧನರಾಜ್ ವಗ್ಗೆ, ಉದಯಕುಮಾರ್ ಘಾಲೆ, ಆನಂದ್ ಬಿರಾದಾರ್, ಚನ್ನು ಸಿಲಿವಂತ್, ಗಿರೀಶ್ ವಗದಾಳೆ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading

Subscribe