1
1

ಬೀದರ್: ಬೀದರ್ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ದೋಶ ಸಹಕಾರ ಸಂಘದ ಕಾರ್ಯದರ್ಶಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಅರ್ಜುನ ಸಿತಾಳಗೇರಾ ಅವರ ಅವಧಿಯಲ್ಲಿ ವಿವಿಧ ಇಲಾಖೆಯಲ್ಲಿ ನಡೆದಿರುವ ಹೊರಗುತ್ತಿಗೆ ನೇಮಕಾತಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಇಂದು ಭಾರತೀಯ ಜೈಭೀಮ ದಳ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಅರ್ಜುನ ಸಿತಾಳಗೇರಾ ಅವರು ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಸಂಘದ ಬೈಲಾ ನಿಯಮಗಳನ್ನು ಉಲ್ಲಂಘಿಸಿ ಹಾಗೂ ಕಾನೂನುಬಾಹಿರವಾಗಿ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದಲ್ಲದೆ, ಅವರು ಕಾರ್ಮಿಕ ಇಲಾಖೆಯಲ್ಲಿ ಯೋಜನಾ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದು, ಎರಡು ಕಡೆಗಳಿಂದ ವೇತನ ಪಡೆಯುವ ಮೂಲಕ ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ಮಾಡಲಾಗಿದೆ. ಈ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಮನವಿ ಮಾಡಲಾಗಿದೆ.
ಸಂಘದ ಕಾರ್ಯದರ್ಶಿಯಾಗಿ ಅವರ ಅವಧಿಯಲ್ಲಿ ನಡೆದಿರುವ ಹೊರಗುತ್ತಿಗೆ ನೇಮಕಾತಿಗಳು ಹಾಗೂ ಕಾರ್ಮಿಕ ಇಲಾಖೆಯಲ್ಲಿ ಅವರು ಸಲ್ಲಿಸುತ್ತಿರುವ ಸೇವೆಗೆ ಸಂಬAಧಿಸಿದAತೆ ಪ್ರತ್ಯೇಕವಾಗಿ ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಾಗಿದೆ.
ತನಿಖೆ ಕೈಗೊಳ್ಳಲು ವಿಳಂಬ ಮಾಡಿದರೆ, ತನಿಖೆಗೆ ಆಗ್ರಹಿಸಿ ಭಾರತೀಯ ಜೈಭೀಮ ದಳ ಜಿಲ್ಲಾ ಘಟಕದ ವತಿಯಿಂದ ಒಂದು ದಿನದ ಸಾಂಕೇತಿಕ ಧರಣಿ ನಡೆಸುವುದು ಅನಿವಾರ್ಯವಾಗಲಿದೆ ಎಂದು ದೂರಿನಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಂಬೇಡ್ಕರ್ ಸಾಗರ, ತಾಲೂಕಾ ಅಧ್ಯಕ್ಷ ದೇವೆಂದ್ರ ಶರ್ಮಾ, ಡಿ.ಎಸ.ಎಸ ಜಿಲ್ಲಾಧ್ಯಕ್ಷ ಗೌತಮ ಭೋಸ್ಲೆ ಹಾಗೂ ಮುಕೇಶ ಇದ್ದರು.