Popular Posts

ಅಧಿಕ ಶುಲ್ಕ: ಖಾಸಗಿ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ್: ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಪಡೆಯುತ್ತಿರುವ ಜಿಲ್ಲೆಯ ಖಾಸಗಿ ಪದವಿಪೂರ್ವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನಿಯಮ ಗಾಳಿಗೆ ತೋರುತ್ತಿವೆ. ನೀಟ್, ಕೆಸಿಇಟಿ, ಜೆಇಇ ತರಬೇತಿ ಹೆಸರಲ್ಲಿ ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುತ್ತಿವೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಸಚಿವರ ಗಮನ ಸೆಳೆದರು.
ಪೆÇೀಷಕರು ಶುಲ್ಕ ಕಟ್ಟಲು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗುತ್ತಿದ್ದು, ಅವರಿಗೆ ಏಕಾಗ್ರತೆಯಿಂದ ವ್ಯಾಸಂಗ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕ, ವಿಷಯ ಪರಿವೀಕ್ಷಕ ಸೇರಿ 14 ಹುದ್ದೆಗಳು ಖಾಲಿ ಇರುವ ಕಾರಣ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತಿದೆ ಎಂದು ತಿಳಿಸಿದರು.
ಇಲಾಖೆಗೆ ಮಂಜೂರಾದ 42 ಹುದ್ದೆಗಳ ಪೈಕಿ 28 ಸಿಬ್ಬಂದಿ ಮಾತ್ರ ಇದ್ದಾರೆ. ಸಿಬ್ಬಂದಿ ಕೊರತೆಯಿಂದ ಇರುವ ಸಿಬ್ಬಂದಿ ಮೇಲೆ ಕೆಲಸದ ಭಾರ ಹೆಚ್ಚಾಗಿದೆ. ಯಾರಾದರೂ ರಜೆ ಪಡೆದರೆ ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಕಡತಗಳ ವಿಲೇವಾರಿ ಮೇಲೆ ಪರಿಣಾಮ ಉಂಟಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಖಾಲಿ ಇರುವ  ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಬೇಡಿಕೆ ಮಂಡಿಸಿದರು.
ತಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಅಧಿಕ ಶುಲ್ಕ ಪಡೆಯುತ್ತಿರುವ ಖಾಸಗಿ


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading