ಎಸ್‌ಐಆರ್ ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿರುವ ಹಿನ್ನೆಲೆಯಲ್ಲಿ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.ಭಾರತೀಯ ಜನತಾ ಪಾರ್ಟಿ ಔರಾದ(ಬಿ) ಮಂಡಲದ ವತಿಯಿಂದ ಆ.23ರಂದು ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಎಲ್‌ಎ-2 ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಸ್‌ಐಆರ್ ಮೊದಲನೇ ಹಂತ ಪೂರ್ಣಗೊಂಡಿದ್ದು, ಇದೀಗ ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬಿಎಲ್‌ಎ-2ಗಳಿಗೆ ಸೂಚಿಸಿದರು.
ಮತದಾನ ಕೇವಲ ಹಕ್ಕು ಮಾತ್ರವಲ್ಲ, ದೇಶದ ಭವಿಷ್ಯವನ್ನು ರೂಪಿಸುವ ಜವಾಬ್ದಾರಿಯೂ ಆಗಿದೆ. ಪ್ರತಿಯೊಂದು ಮತವೂ ಜನಪ್ರತಿನಿಧಿಗಳ ಆಯ್ಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಮುಂದಿನ ದಿನಗಳಲ್ಲಿ ಮತದಾರರ ಗುರುತಿನ ಚೀಟಿ ಸರ್ಕಾರದ ಯೋಜನೆಗಳಿಗೆ ಜೋಡಣೆಯಾಗುವ ಸಾಧ್ಯತೆಗಳಿರುವ ಕಾರಣ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾರರ ಪಟ್ಟಿಯಲ್ಲಿ ಇರುವಂತೆ ಮತ್ತು ಮತದಾನದ ಹಕ್ಕನ್ನು ರಕ್ಷಿಸುವ ದಿಶೆಯಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕರ್ತರ ಪ್ರಮುಖ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟಿದ್ದರೆ, ನಿಯಮಾನುಸಾರ ಆಕ್ಷೇಪಣೆ ಅಥವಾ ಅಗತ್ಯ ಅರ್ಜಿ ಸಲ್ಲಿಸುವ ಮೂಲಕ ಹೆಸರು ಸೇರ್ಪಡೆಗೆ ಕ್ರಮ ಕೈಗೊಳ್ಳಲು ಸಹಕರಿಸಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದAತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಎಸ್‌ಐಆರ್ ಭಾಗವಾಗಿ ಎನ್ಯೂಮರೇಷನ್ ಅರ್ಜಿಗಳನ್ನು ಮನೆ ಮನೆಗೆ ತಲುಪಿಸಿ ಸೂಕ್ತ ರೀತಿಯಲ್ಲಿ ಭರ್ತಿ ಮಾಡಿ ಸಲ್ಲಿಸಲು ಪಕ್ಷದ ಕಾರ್ಯಕರ್ತರು ಮಾಡಿರುವ ಸೇವೆ ಅನನ್ಯವಾದದ್ದು, ಅದರಂತೆ ಮುಂದಿನ ದಿನಗಳಲ್ಲಿಯೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಿ, ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಅಗತ್ಯ ತಿದ್ದುಪಡಿ ಪ್ರಕ್ರಿಯೆಯಲ್ಲಿ ಜನರಿಗೆ ಸಹಕಾರ ನೀಡಬೇಕು ಎಂದು ಶಾಸಕರು ಕರೆ ನೀಡಿದರು.
ನಮ್ಮ ಕ್ಷೇತ್ರದ ಅನೇಕರು ಕೆಲಸಕ್ಕಾಗಿ ಮುಂಬೈ, ಪುಣೆ, ಉದಗೀರ, ಲಾತೂರ, ಹೈದ್ರಾಬಾದ ಸೇರಿದಂತೆ ಬೇರೆ ಬೇರೆ ಕಡೆ ಹೋಗಿದ್ದಾರೆ. ಎಸ್‌ಐಆರ್ ಬಗ್ಗೆ ಮಾಹಿತಿ ಇಲ್ಲದ ಕೆಲವರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಅಂಥವರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಸಹಕರಿಸಬೇಕು. ಸಾರ್ವಜನಿಕರು ಕೂಡ ಎಸ್‌ಐಆರನ್ನು ಗಂಭೀರವಾಗಿ ಪರಿಗಣಿಸಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅವಶ್ಯಕತೆಗೆ ತಕ್ಕಂತೆ ಹೊಸ ಅರ್ಜಿ ಸಲ್ಲಿಸಲು ಫಾರ್ಮ್ 7, ಆಕ್ಷೇಪಣೆಗೆ ಫಾರ್ಮ್ 8 ಮತ್ತು ತಿದ್ದುಪಡಿ ಅಥವಾ ಸ್ಥಳಾಂತರಕ್ಕಾಗಿ ಫಾರ್ಮ್ 8 ಭರ್ತಿ ಸಲ್ಲಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ, ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ, ಪ್ರಶಿಕ್ಷಣ ಪ್ರಕೋಷ್ಟದ ರಾಜ್ಯ ಸಂಚಾಲಕರಾದ ರಾಜಶೇಖರ ನಾಗಮೂರ್ತಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ಉಪಾಧ್ಯಕ್ಷ ಅರಹಂತ ಸಾವಳೆ, ಮುಖಂಡರಾದ ಬಾಬುರಾವ ಕಾರಬಾರಿ, ಚಂದ್ರಶೇಖರ ಪಾಟೀಲ, ವಸಂತ ಬಿರಾದಾರ, ಧೊಂಡಿಬಾ ನರೋಟೆ, ರಂಗರಾವ ಜಾಧವ, ಶಿವಾನಂದ ವಡ್ಡೆ, ನಿಲೇಶ ರಕ್ಷಾö್ಯಳೆ, ಶಿವರಾಜ ಅಲ್ಮಾಜೆ, ಖಂಡೋಬಾ ಕಂಗಟೆ, ಪ್ರಕಾಶ ಅಲ್ಮಾಜೆ, ಬಾಬುರಾವ ವಾಡಿ, ಪ್ರವೀಣ ಕಾರಬಾರಿ, ಸಾಗರ ಪಾಟೀಲ, ಶಿವಕುಮಾರ ಪಾಂಚಾಳ, ರಾಜಶೇಖರ ಶೆಳ್ಕೆ, ಗಣೇಶ ಕಾರೆಗಾವೆ, ಮಲ್ಲಪ್ಪ ದಾನಾ, ಅಶೋಕ ಅಲ್ಮಾಜೆ, ಯೋಗೇಶ ಪಾಟೀಲ, ಬಂಟಿ ರಾಂಪೂರೆ, ಉದಯ ಸೋಲಾಪೂರೆ, ಪ್ರಕಾಶ ಜೀರ್ಗೆ, ರಾಜಕುಮಾರ ಸೋರಾಳೆ, ಸಂಜು ಮುರ್ಕೆ, ಸಚಿನ ಬಿರಾದಾರ, ದಯಾನಂದ ಘೂಳೆ, ಶಕುಂತಲಾ ಮುತ್ತಂಗೆ, ಗೀತಾ ರೆಡ್ಡಿ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಬಿಎಲ್‌ಎ-2, ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Discover more from ಕಲಿಯುಗದ ಕೂಗು
Subscribe to get the latest posts sent to your email.