1
1

ಕಲಬುರಗಿ: ಆಗಸ್ಟ್.14.(ಕಕ ವಾರ್ತೆ)- ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಆಗಸ್ಟ್ 28 ರಂದು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಪ್ರಭು ಹಿರೇಮಠ ಅವರ ಸಭೆಯಲ್ಲಿ ನಿರ್ಧರಿಸಲಾಯಿತು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಇದೇ ಆಗಸ್ಟ್ 28 ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನುರಿತ ಉಪನ್ಯಾಸಕರನ್ನು ಸಹ ಆಹ್ವಾನಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದರ ಜೊತೆಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶ್ರೀಮಂತ ಎಲ್. ಜಾಧವ ರನ್ನು ಜಯಂತಿ ಸಮಿತಿ ಅಧ್ಯಕ್ಷರನ್ನಾಗಿ ಹಾಗು ಉಪನ್ಯಾಸಕರಾಗಿ ಶಿವರಂಜನ್ ಸತ್ಯಂಪೇಟ ರನ್ನು ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ಅ. ನಾಸಿ ಅವರು ಪೆÇ್ರೀಟೋಕಾಲ್ ಪ್ರಕಾರ ಕಾರ್ಯಕ್ರಮ ಪತ್ರಿಕಾ ಆಮಂತ್ರಣ ಮುದ್ರಿಸಲಾಗುವುದು. ನಾಡಗೀತೆ, ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ವೇದಿಕೆ ಮೇಲೆ ಸಮಾಜದ ಮುಖಂಡರಾದ ಹಣಮಂತ ಭಜಂತ್ರಿ, ವಿಷ್ಣು ಭಜಂತ್ರಿ, ರಮೇಶ್ ಜಾಧವ್, ಸುನಿಲ್ ಮಾನ್ಪಡೆ, ಮಂಜುಳಾ ಭಜಂತ್ರಿ, ಮಹಾದೇವಿ ಭಜಂತ್ರಿ, ಭೀಮರಾವ ಭಜಂತ್ರಿ, ಸಿದ್ದಲಿಂಗ, ಜಗನ್ನಾಥ, ಶಿವಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
Subscribe to get the latest posts sent to your email.