Popular Posts

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ 50 ಲಕ್ಷ ಪರಿಹಾರಕ್ಕೆ ಆಗ್ರಹ

ಬೀದರ: ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಸಂಜುಕುಮಾರ ಹೊಸಮನಿ ಅವರ ಕುಟುಂಬಕ್ಕೆ ಸರ್ಕಾರದಿಂದ ರೂ.50 ಲಕ್ಷ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ ನಡೆಯುತ್ತಿರುವ ಹೋರಾಟ ಮುಂದುವರಿದಿದೆ.

ಚಿಟಗುಪ್ಪಾ ತಾಲೂಕಿನ ತಾಳಮಡಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-65ರ ಬಳಿ ಜ.14ರಂದು ನಡೆದ ದುರ್ಘಟನೆಯಲ್ಲಿ ಬಂಬುಳಗಿ ಗ್ರಾಮದ ನಿವಾಸಿ ಸಂಜುಕುಮಾರ ತಂದೆ ಗುಂಡಪ್ಪ ಹೊಸಮನಿ (45) ಅವರು ನಿμÉೀಧಿತ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮೃತಪಟ್ಟಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿರುವ ಪಕ್ಷದ ಮುಖಂಡರು, ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಪರಿಹಾರ ದೊರೆತಿಲ್ಲ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ ಗುತ್ತೆದಾರ ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆ.6ರಂದು ಮನ್ನಾಎಖೇಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬೀದರ್ ನಗರದ ಅಂಬೇಡ್ಕರ್ ವೃತ್ತದವರೆಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಮುದಾಯದ ಹಿರಿಯರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಧರಣಿ ಆರಂಭಿಸಲಾಗಿತ್ತು. ನಾಲ್ಕು ದಿನಗಳ ಧರಣಿಯ ಬಳಿಕ ಇದೀಗ ಉಪವಾಸ ಸತ್ಯಾಗ್ರಹ ಮುಂದುವರಿಸಲಾಗಿದೆ.

ಆ.10ರಂದು ಮಾಜಿ ಸಚಿವ ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಬಂಡೆಪ್ಪ ಖಾಶೆಂಪೂರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಮೃತ ಕುಟುಂಬಕ್ಕೆ ಪರಿಹಾರ ಕಲ್ಪಿಸುವಂತೆ ಆ.13ರಂದು ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ನೀಡಿದರು ಎಂದು ಅವರು ತಿಳಿಸಿದ್ದಾರೆ.

ಮಾದಿಗ ದಂಡೋರಾ ಹೋರಾಟ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫನಾರ್ಂಡಿಸ್ ಹಿಪ್ಪಳಗಾಂವ್ ಕೂಡ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸಿ, ಸರ್ಕಾರ ಶೀಘ್ರ ಪರಿಹಾರ ಘೋಷಿಸದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಪಕ್ಷದ ಪ್ರಮುಖ ಬೇಡಿಕೆಗಳು: ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕುಟುಂಬಕ್ಕೆ 5 ಎಕರೆ ಜಮೀನು ಮಂಜೂರು ಮಾಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು.ಮೃತರ ಪುತ್ರಿಯನ್ನು ಕೊಡಲ್ಗಿ ತಾಲ್ಲೂಕಿನಿಂದ ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡಬೇಕು.ಧರಣಿ ಉಪವಾಸದಲ್ಲಿ ಭಾಗಿಯಾದವರು:ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ ಮಾರುತಿ ಗುತ್ತೇದಾರ ಬಗದಲ,ಸಾಗರ ರಾಜಣ್ಣ ಜ್ಯೋತಿ ಬಸಂತ್‍ಪುರ್,ಸುಬ್ಬಣ್ಣ ಚಂದ್ರಪ್ಪ ಭಾಗ್ಯನೋರ ಬಂಬಳಗಿ,ದಿಲೀಪ ಜಗನ್ನಾಥ ಮೇತ್ರಿ ನಾಗೂರ್ (ಎನ್).


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading