1
1

ಬೀದರ್: ಬೀದರ್ನಲ್ಲಿ ನಡೆದಿದ್ದ ಎಬಿಐ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಿರುವ ಜಿಲ್ಲೆಯ ಪೊಲೀಸರ ಕಾರ್ಯವನ್ನು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಸಂಯೋಜಕ ಪ್ರಕಾಶ್ ಘಾಳೆ ಶ್ಲಾಘಿಸಿದ್ದಾರೆ.
ಎಟಿಎಂ ದರೋಡೆ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಆರೋಪಿಗಳು ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದರು. ಕೊನೆಗೂ ಬೀದರ್ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಚಿವ ಈಶ್ವರ ಖಂಡ್ರೆ ಅವರು ಎಟಿಎಂ ದರೋಡೆಕೋರರ ಬಂಧನ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದರು. ಆರೋಪಿಗಳ ಬಂಧನವು ಕಾಂಗ್ರೆಸ್ ಸರ್ಕಾರ ಅಪರಾಧಗಳನ್ನು ಸಹಿಸಲ್ಲ. ಆರೋಪಿಗಳು ಯಾರೇ ಆಗಿದ್ದರೂ ಅವರನ್ನು ಬಿಡುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದೆ ಎಂದು ತಿಳಿಸಿದ್ದಾರೆ.
ದರೋಡೆಕೋರರ ಬಂಧನಕ್ಕಾಗಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
Subscribe to get the latest posts sent to your email.