Popular Posts

ಒಳಮೀಸಲಾತಿ ಜಾತಿ ಪ್ರಮಾಣ ಪತ್ರ ಶೀಘ್ರ ವಿತರಿಸಲು ಆಗ್ರಹ

ಬೀದರ್: ಕರ್ನಾಟಕ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗೆ ಸಂಬAಧಿಸಿದ ಹೊಸ ವರ್ಗೀಕರಣದಡಿ ಜಾತಿ ಪ್ರಮಾಣ ಪತ್ರ ಪಡೆಯಲು ವಿದ್ಯಾರ್ಥಿಗಳು ಕಚೇರಿಗಳಿಗೆ ಅಲೆದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ 3-4 ದಿನಗಳೊಳಗೆ ಜಾತಿ ಪ್ರಮಾಣ ಪತ್ರ ವಿತರಿಸುವ ವ್ಯವಸ್ಥೆ ಮಾಡಬೇಕು ಎಂದು ಜನತಾ ದಳ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಅಭೀ ಕಾಳೆ ಅವರು ತಹಸೀಲ್ದಾರರಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ವಿವಿಧ ಗುಂಪುಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಹೊಸದಾಗಿ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ ಪ್ರಮಾಣ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿರುವುದರಿAದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಗಳು ಈಗಾಗಲೇ ಪ್ರಕಟವಾಗಿದ್ದು, ಅರ್ಜಿ ಸಲ್ಲಿಸಲು ಕೇವಲ 15ರಿಂದ 20 ದಿನಗಳ ಕಾಲಾವಕಾಶ ನೀಡಲಾಗುತ್ತಿದೆ. ಜಾತಿ ಪ್ರಮಾಣ ಪತ್ರದ ಅಗತ್ಯವಿರುವ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿದೆ. ಅಲ್ಲದೆ, ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕಚೇರಿಗಳಿಗೆ ಹಲವು ದಿನಗಳ ರಜೆ ಇರುವುದರಿಂದ ಪ್ರಮಾಣ ಪತ್ರ ಪಡೆಯುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿರುವ ವಿದ್ಯಾರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ, ಅವರನ್ನು ಸಂಬAಧಿಸಿದ ಒಳಮೀಸಲಾತಿ ಗುಂಪಿಗೆ ಸೇರಿಸಿ, ಶೀಘ್ರವಾಗಿ ಹೊಸ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ 3-4 ದಿನಗಳೊಳಗೆ ಪ್ರಮಾಣ ಪತ್ರ ನೀಡುವ ವಿಶೇಷ ವ್ಯವಸ್ಥೆ ಕಲ್ಪಿಸಬೇಕು ಎಂದು ಅಭೀ ಕಾಳೆ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಸಂಬರ್ಧದಲ್ಲಿ ಅರುಣ್ ಕುಮಾರ್ ವರ್ಮಾ, ರಾಹುಲ್ ಹಲ್ಲೇಪೂರ್ಗಿಕರ, ಮೋಹನ್ ವಿಲ್ಸನ್, ಅವಿನಾಶ್ ಬೂದೆಕರ್ ಹಾಗೂ ಇನ್ನಿತರು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading