Popular Posts

ಕಪಲಾಪುರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜಾ ಕಾರ್ಯಕ್ರಮ – ಸದ್ಗುರು ಪೂರ್ಣನಂದ ಭಾರತಿ ಸ್ವಾಮೀಜಿಗಳ ದಿವ್ಯ ಸಾನಿಧ್ಯ

ಬೀದರ್, ಫೆಬ್ರವರಿ 2026 :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೀದರ್ ತಾಲೂಕು ವತಿಯಿಂದ ಅಣದುರ್ ವಲಯದ ಕಪಲಾಪುರ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಿದ್ದಾರೋಡ ಮಠ, ಕಪಲಾಪುರದ ಪರಮಪೂಜ್ಯ ಶ್ರೀ ಸದ್ಗುರು ಪೂರ್ಣನಂದ ಭಾರತಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದ ಯೋಜನಾಧಿಕಾರಿ ಧರ್ಮೇಂದ್ರ ಎನ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ ಹಾಗೂ ಸಮಾಜಮುಖಿ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹಣಮಂತರಾವ ಮೈಲಾರೆ (ನಿವೃತ್ತ ಪ್ರಾಂಶುಪಾಲರು) ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವೆಗಳನ್ನು ಜನರು ಸದುಪಯೋಗಪಡಿಸಿಕೊಂಡು ತಮ್ಮ ಕುಟುಂಬಗಳನ್ನು ಆರ್ಥಿಕವಾಗಿ ಸದೃಢಗೊಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಶ್ರೀನಿವಾಸ ರೆಡ್ಡಿ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರು, ಯೋಜನೆಯ ವಿವಿಧ ಕಾರ್ಯಕ್ರಮಗಳು ಮತ್ತು ಸೇವೆಗಳ ಮಹತ್ವದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿವರಾಜ್ ಮಾಲಿಪಾಟೀಲ, ಶಿವಕುಮಾರ್ ಕೋಲಾರೆ, ಧನರಾಜ ವಗ್ಗೆ, ಗಂಗಾಧರ ರೊಡ್ಡ, ಅಮರ ಚಾಂಬೋಳ, ಪುಟ್ಟರಾಜ ಶಿರೋಮಣಿ, ಸೇರಿದಂತೆ ಸೇವಾಪ್ರತಿನಿಧಿಗಳು ಹಾಗೂ VLE ಸಿಬ್ಬಂದಿಗಳು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading