ಬೀದರ, ಫೆಬ್ರವರಿ.23 :- ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಕ್ರಿಯಾಯೋಜನೆ ಸಿದ್ದಪಡಿಸಿ ಒಂದು ವಾರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಸಂಬAಧಿಸಿದ ತಾಲ್ಲೂಕಾ ತಹಸೀಲ್ದಾರ, ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲರಾಗಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ತಿಳಿಸಿದರು.
ಈ ವರ್ಷ ಮುಂಬರುವ ದಿನಗಳಲ್ಲಿ ತಾಪಮಾನವು ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ವರದಿಯಿದೆ. ಕಳೆದ ಮರ್ನಾಲ್ಕು ವರ್ಷಗಳ ಅನುಭವದ ಹಿನ್ನೆಲೆಯಲ್ಲಿ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ದಗೊಳಿಸಿ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ನಗರ ಹಾಗೂ ಗ್ರಾಮೀಣ ಜನತೆಗೆ ಸ್ಥಳೀಯ ಸಂಸ್ಥೆ ತಮ್ಮ ಅನುದಾನದಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕು. ಜಾನುವಾರುಗಳಿಗೂ ಸಹ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲ ತಹಸೀಲ್ದಾರರು ಕ್ರಿಯಾಯೋಜನೆಯನ್ನು ಸಿದ್ಧಗೊಳಿಸಬೇಕು. 15 ದಿನಕ್ಕೊಮ್ಮೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆ ಸೇರಿ ಸಮಸ್ಯೆಗಳನ್ನು ಷರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದರು.
ಕಳೆದ ಬಾರಿ ಕಂಡುಬAದ ಸಮಸ್ಯೆಗಳ ಆಧಾರದ ಮೇಲೆ ಈಗಾಗಲೇ ಸಿದ್ಧಗೊಳ್ಳಬೇಕು. ಬರ ಘೋಷಣೆಯಾದಲ್ಲಿ ತಾಲ್ಲೂಕಾ ಟಾಸ್ಕ್ಫೋರ್ಸ್ ಅನುದಾನದಲ್ಲಿ ಕೊಳವೆ ಬಾವಿ ಪುನರಜ್ಜೀವನ, ಪೈಪಲೈನ್, ಮೋಟಾರ್ ರಿಪೇರಿ, ಖಾಸಗಿ ಕೊಳವೆಬಾವಿ ಬಾಡಿಗೆ, ಕಾಮಗಾರಿ ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಕೈಗೊಳ್ಳಬಹುದೆಂದರು.
ಔರಾದ್ ಹಾಗೂ ಕಮಲನಗರ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು. ಔರಾದ್ನಲ್ಲಿ ಕಳೆದ ಬಾರಿ 48 ಗ್ರಾಮಗಳಲ್ಲಿ ಹಾಗೂ 29 ತಾಂಡಾಗಳಲ್ಲಿ ತೀವೃ ನೀರಿನ ಸಮಸ್ಯೆ ಎದುರಾಗಿತ್ತು ಎಂದು ತಾಲ್ಲೂಕು ಪಂಚಾಯತ ಅಧಿಕಾರಿ ಸಭೆಗೆ ತಿಳಿಸಿದರು. ಕಮಲನಗರದ ಚಿಕಲಿ ಸುತ್ತಲಿನ 28 ತಾಂಡಾ ಹಾಗೂ ಭಾಲ್ಕಿ ತಾಲ್ಲೂಕಿನ 15 ಗ್ರಾಮಗಳಲ್ಲಿ ಸಮಸ್ಯೆ ಎದುರಾಗಿತ್ತು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಖಾಸಗಿ ಕೊಳವೆ ಬಾವಿ ಬಾಡಿಗೆಗೆ ಈಗಾಗಲೇ ಗುರುಗಿಸಿಕೊಳ್ಳಬೇಕು. ತೆರೆದ ಬಾವಿ ಹಾಗೂ ಸಣ್ಣ ನೀರಾವರಿ ಇಲಾಖೆಯ ಕೆರೆಗಳನ್ನು ಸಹ ಕುಡಿಯುವ ನೀರಿಗೆ ಬಳಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಧಿಕಾರಿಗಳು ಈಗಲೇ ಕ್ರಿಯಾಯೋಜನೆ ಸಿದ್ದಪಡಿಸಿಕೊಂಡು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಈಗಿರುವ ಮೇವು ಆಧ್ಯತೆ, ದಾಸ್ತಾನು ಗಮನಿಸಬೇಕು. ಜಿಲ್ಲೆಯ ಹೊರಗೆ ಮೇವು ಸಾಗಾಟ ಆಗದಂತೆ ತಹಸೀಲ್ದಾರರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಬಿ.ಕರಾಳೆ, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಆಯಾ ತಾಲ್ಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವ್ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
*****
Related