1
1

ಕಲಬುರಗಿ, ಆಗಸ್ಟ್.14 (ಕರ್ನಾಟಕ ವಾರ್ತೆ)- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ರೂ152 ಕೋಟಿ ವೆಚ್ಚದಲ್ಲಿ 400 ನೂತನ ಬಸ್ಗಳನ್ನು ಖರೀದಿಸಲು ರಾಜ್ಯ ಸರ್ಕಾರದ ಮುಂಗಾರು ಅಧಿವೇಶನದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ನಿರ್ಧಾರವನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಮ್.ವಾಯ್. ಪಾಟೀಲ ಅವರು ಸರ್ಕಾರದ ನಿರ್ಧಾರಕ್ಕೆ ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಇದರಿಂದಾಗಿ ನಿಗಮದ ಹಾಲಿ ಅನುಸೂಚಿಗಳ ಕಾರ್ಯಾಚರಣೆಗೆ ಬಸ್ಗಳ ಕೊರತೆ ಎದುರಾಗಿದ್ದು, ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ತೊಂದರೆಯಾಗುತ್ತಿತ್ತು. ಈ ಸಮಸ್ಯೆಯನ್ನು ಮನಗಂಡು ಹೊಸ ಬಸ್ಗಳ ಸೇರ್ಪಡೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಈಗ ಅಂತಿಮ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.
ಬಸ್ಗಳ ಖರೀದಿಗೆ ಅಗತ್ಯವಿರುವ ಒಟ್ಟು 152.00 ಕೋಟಿ ರೂಪಾಯಿ ವೆಚ್ಚದಲ್ಲಿ ಶೇಕಡಾ 50 ರಷ್ಟು ಮೊತ್ತವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಉಳಿದ ಶೇಕಡಾ 50 ರಷ್ಟು ಮೊತ್ತವನ್ನು ಕರ್ನಾಟಕ ಸರ್ಕಾರ ನೀಡಲಿದ್ದು, ಈ ಅನುದಾನವನ್ನು ಹಂತ-ಹಂತವಾಗಿ ಬಳಸಿಕೊಳ್ಳಲಾಗುವುದು ಎಂದರು.
ಈ ಮಹತ್ವದ ಯೋಜನೆಯಿಂದ ಕಲ್ಯಾಣ ಕರ್ನಾಟಕ ಭಾಗದ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಪ್ರದೇಶದ ಪ್ರಯಾಣಿಕರಿಗೆ ಸುಗಮ ಮತ್ತು ಸಮರ್ಪಕ ಸಾರಿಗೆ ಸೌಲಭ್ಯ ದೊರೆಯಲಿದೆ.
ಈ ಸಂದರ್ಭದಲ್ಲಿ, ನಿಗಮಕ್ಕೆ ಅನುಮೋದನೆ ನೀಡಲು ಸಹಕರಿಸಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತು ಅಂದಿನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವ ಭೈರತಿ ಸುರೇಶ್, ಸೇರಿದಂತೆ ಸಚಿವರು ಮತ್ತು ಜಿಲ್ಲೆಯ ಶಾಸಕರುಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಭಾಗದ ಎಲ್ಲಾ ಜನಪ್ರತಿನಿಧಿಗಳಿಗೆ ಕೆ.ಕೆ.ಆರ್.ಟಿ.ಸಿ ಅಧ್ಯಕ್ಷರು ಅವರು ನಿಗಮದ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ.
Subscribe to get the latest posts sent to your email.