ಬಸವೇಶ್ವರ ವೃತ್ತದ ಬಳಿ ಆರಂಭಗೊAಡ ತಿರಂಗಾ ಯಾತ್ರೆಯು ಬಸ್ ನಿಲ್ದಾಣ, ಎಪಿಎಂಸಿ ವೃತ್ತ, ಡಾ. ಚನ್ನಬಸವ ಪಟ್ಟದೇವರು ವೃತ್ತ ಹಾಗೂ ಅಮರೇಶ್ವರ ಮಂದಿರದ ಮಾರ್ಗವಾಗಿ ಸಂಚರಿಸಿ ಮತ್ತೆ ಬಸವೇಶ್ವರ ವೃತ್ತದ ಬಳಿ ಸಮಾಪ್ತಿಗೊಂಡಿತು.
ಯಾತ್ರೆಯುದ್ದಕ್ಕೂ ತ್ರಿವರ್ಣ ಧ್ವಜಗಳು ರಾರಾಜಿಸಿದವು. ‘ಭಾರತ ಮಾತಾ ಕಿ ಜೈ’, ‘ವಂದೇ ಮಾತರಂ’ ಸೇರಿದಂತೆ ದೇಶಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿ ಗೀತೆಗಳ ತಾಳಕ್ಕೆ ಯುವಕರು ಉತ್ಸಾಹದಿಂದ ಹೆಜ್ಜೆ ಹಾಕಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಔರಾದ(ಬಿ) ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಸ್ವಾತಂತ್ರ್ಯವೆAಬುದು ನಮಗೆ ಸುಲಭವಾಗಿ ದೊರೆತದ್ದಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ತಿರಂಗಾ ನಮ್ಮ ದೇಶದ ಹೆಮ್ಮೆ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ ಎಂದರು.
ಯುವಜನರಲ್ಲಿ ದೇಶಭಕ್ತಿ, ರಾಷ್ಟ್ರೀಯ ಏಕತೆ ಮತ್ತು ದೇಶದ ಮೇಲಿನ ಅಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.
ತಿರಂಗಾ ಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ ಮುಂಗನಾಳ, ಶಿವರಾಜ ಅಲ್ಮಾಜೆ, ಶಿವಾನಂದ ವಡ್ಡೆ, ಪ್ರಕಾಶ ಅಲ್ಮಾಜೆ, ದಯಾನಂದ ಘೂಳೆ, ಕೇರಬಾ ಪವಾರ್, ಸಂಜು ವಡೆಯರ್, ಅಶೋಕ ಮೇತ್ರೆ, ಖಂಡೋಬಾ ಕಂಗಟೆ, ಶಿವಾಜಿರಾವ ಕಾಳೆ, ಶ್ರೀನಿವಾಸ ಖೂಬಾ, ಬಸವರಾಜ ಹಳ್ಳೆ, ಬಂಟಿ ರಾಂಪೂರೆ, ನಾಗೇಶ ಪತ್ರೆ, ಉದಯ ಸೋಲಾಪೂರೆ, ಸಂಜು ಮುರ್ಕೆ, ಶಿವಕುಮಾರ ಪಾಂಚಾಳ, ರಾಜಕುಮಾರ ಸೋರಾಳೆ, ರವೀಂದ್ರ ರೆಡ್ಡಿ, ಪ್ರಕಾಶ ಜೀರ್ಗೆ, ಗುಂಡಪ್ಪ ಮುಧಾಳೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉಪಸ್ಥಿತರಿದ್ದರು.
Discover more from ಕಲಿಯುಗದ ಕೂಗು
Subscribe to get the latest posts sent to your email.