1
1

ಬೀದರ್: ಇಲ್ಲಿಯ ಕಾಂಗ್ರೆಸ್ ಮುಖಂಡ ಜಾರ್ಜ್ ಫರ್ನಾಂಡೀಸ್ ಅವರಿಗೆ ನಿಗಮ ಅಥವಾ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ವಿವಿಧ ಸಮಾಜಗಳ ಮುಖಂಡರು ಒತ್ತಾಯಿಸಿದ್ದಾರೆ.
ಫರ್ನಾಂಡೀಸ್ ಅವರು ಕಳೆದ 18 ವರ್ಷಗಳಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ ಬೀದರ್ ನಗರ ಘಟಕದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಘಟಕದ ಕಾರ್ಯದರ್ಶಿ ಹಾಗೂ ವಕ್ತರರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ಕೊಟ್ಟಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಎಲ್ಲ ಜಾತಿ, ಸಮುದಾಯಗಳ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತ ಬಂದಿದ್ದಾರೆ ಎಂದು ಹೇಳಿದ್ದಾರೆ.
ಫರ್ನಾಂಡೀಸ್ ಅವರಿಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಲ್ಲಿ ಅವರಿಗೆ ಪಕ್ಷದ ಚಟುವಟಿಕೆಗಳಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ. ಹೀಗಾಗಿ ಪಕ್ಷದ ವರಿಷ್ಠರು ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ, ಅಧ್ಯಕ್ಷ ಹುದ್ದೆ ಕೊಡಬೇಕು ಎಂದು ಬೀದರ್ ನಗರಸಭೆ ಮಾಜಿ ಉಪಾಧ್ಯಕ್ಷ ಫೆಲೋಮನ್ರಾಜ್ ಪ್ರಸಾದ್, ವಲ್ರ್ಡ್ ಹ್ಯೂಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರದೀಪಕುಮಾರ್, ಜಿಲ್ಲಾ ಮಡಿವಾಳ ಸಮಾಜ ಉಪಾಧ್ಯಕ್ಷ ಶಿವಕುಮಾರ ಚೌಧರಿ, ಮಹಾನಾಯಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಆನಂದರಾಜ್ ಲಾಡೆ, ಮೈನಾರಿಟಿ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಮದ್, ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆನಂದ ಠಾಕೂರ್, ಮುಖಂಡರಾದ ಇಸ್ರೆಲ್ ಕೊಳಾರ್, ಅರವಿಂದ ಹೊನ್ನಡ್ಡಿ, ಸಂಜೀವ್ ಸಂತಪುರಕರ್ ಮತ್ತಿತರರು ಬೇಡಿಕೆ ಮಂಡಿಸಿದ್ದಾರೆ.
Subscribe to get the latest posts sent to your email.