Popular Posts

ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸಿ-ಎಡಿಸಿ ಶಿವಾನಂದ ಬಿ.ಕರಾಳೆ

ಬೀದರ, ಫೆಬ್ರವರಿ.18 :- ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿರುವ ಜೀತ ಪದ್ಧತಿಯ ನಿರ್ಮೂಲನೆಗೆ ಎಲ್ಲಾ ಅಧಿಕಾರಿಗಳು ಕೈ ಜೋಡಿಸಿದಾಗ ಮಾತ್ರ ಜೀತ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಕಾರ್ಮಿಕ ಇಲಾಖೆ ಬೀದರ ಇವರುಗಳ ಸಯುಂಕ್ತಾಶ್ರಯದಲ್ಲಿ ಜೀತ ಪದ್ದತಿ ನಿರ್ಮಲನಾ ದಿನಾಚರಣೆ ಕುರಿತು ನಿಷೇಧ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿನ ಅನೇಕ ಸಮಸ್ಯೆಗಳಲ್ಲಿ ಜೀತ ಪದ್ಧತಿಯೂ ಒಂದು. ಇದು ಮಾನವೀಯತೆಗೆ ಕಳಂಕ, ಶಾಪವಾಗಿ ಪರಿಣಮಿಸಿದೆ. ಜೀತ ಪದ್ಧತಿ (ರದ್ದತಿ) ಕಾಯ್ದೆ 1976 ರನ್ವಯ ಕಾರ್ಮಿಕರನ್ನು ಜೀತಕ್ಕೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ನಮ್ಮ ಸಂವಿಧಾನವು ನಾಗರಿಕರಿಗೆ ಗೌರವಯುತ ಜೀವನ ನಡೆಸಲು ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ಮಾನವನ ಗೌರವಯುತ ಜೀವನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜೀತ ಪದ್ಧತಿಯ ನಿಯಂತ್ರಣವನ್ನು ಒಂದು ಸಾಮಾಜಿಕ ಬದ್ಧತೆಯನ್ನಾಗಿ ತೆಗೆದುಕೊಂಡು ಅನಿಷ್ಠ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರು ಕೈ ಜೋಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷö್ಮಣ ಕುಳಲಿ ಮಾತನಾಡಿ, ಜೀತ ಕಾರ್ಮಿಕ ಪದ್ದತಿ ನಿರ್ಮೂಲನಾ ಕಾಯ್ದೆ ಕುರಿತು ಮತ್ತು ಕಾನೂನಿನಡಿಯಲ್ಲಿ ವಿಧಿಸುವ ಶಿಕ್ಷೆ ಮತ್ತು ದಂಡದ ಕುರಿತು ಮಾಹಿತಿಯನ್ನು ನೀಡಿದರು. ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನಾ ಕಾಯ್ದೆ ಕುರಿತು ಮತ್ತು ಕಾನೂನಿನಡಿಯಲ್ಲಿ ವಿಧಿಸುವ ಶಿಕ್ಷೆ ಮತ್ತು ದಂಡದ ಕುರಿತು ಮಾಹಿತಿಯನ್ನು ನೀಡಿದರು.
ಬೀದರ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಶರಣಪ್ಪಾ ಕೊಟಪಗೋಳ ಅವರು ಮಾತನಾಡಿ, ಜೀತ ಕಾರ್ಮಿಕ ಪದ್ದತಿ ನಿರ್ಮೂಲನಾ ಕಾಯ್ದೆ ಕುರಿತು ಹಾಗೂ ತಡೆಗಟ್ಟುವ ಕುರಿತು ತಿಳಿಸಿದರು.
ಬೀದರ ಹಿರಿಯ ವಕೀಲರಾದ ಬಿ.ಎಸ್. ಪಾಟೀಲ್ ಅವರು ತಮ್ಮ ಉಪನ್ಯಾಸ ನೀಡಿ ಮಾತನಾಡಿ, ಹಳ್ಳಿಗಳಲ್ಲಿ ಬಡತನದ ಕಾರಣದಿಂದ ಶ್ರೀಮಂತರಿAದ ಸಾಲದ ರೂಪದಲ್ಲಿ ಹಣ ಪಡೆದು ಸಾಲ ತಿರಿಸಲು ಮಾಲೀಕರ ಬಳಿ ಕೆಲಸದ ರೂಪದಲ್ಲಿ ಕಾರ್ಯನಿರ್ವಹಸಿಸುತ್ತಾ ಜೀತರಾಗಿ ಉಳಿಯುತ್ತಾರೆ. ಅಂತಹವರನ್ನು ಪತ್ತೆ ಹಚ್ಚಿ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಎಲ್ಲಾ ಅಧಿಕಾರಿಗಳು ಕೆಲಸ ಮಾಡಬೇಕಾದದ್ದು ಅನಿವಾರ್ಯ ಮತ್ತು ಅಂತಹ ಕಾರ್ಮಿಕರಿಗೆ ಕಾನೂನಿನ ಅರಿವು ಒದಗಿಸುವ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ, ತಾಲ್ಲೂಕಾ ಮಟ್ಟದಲ್ಲಿ ಸಭೆ, ಕಾರ್ಯಕ್ರಮಗಳನ್ನು ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳು ಜೀತ ಪದ್ದತಿ ಮುಕ್ತ ಕುರಿತು ಎಲ್ಲಾ ಅಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾAತ ಪುಜಾರಿ, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮ ಅರ್ಜುನ್ ಸಿತಾಳಗೇರ, ಯೋಜನಾ ನಿರ್ದೇಶಕರು ಬಾಲ ಕಾರ್ಮಿಕ ಯೋಜನೆ, ಕಾರ್ಮಿಕ ಅಧಿಕಾರಿಗಳ ಕಛೇರಿ, ಬೀದರವರು ನಿರೂಪಿಸಿದರು.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading