Popular Posts

ಜ್ಯೋತಿರ್ಲಿಂಗ ಪ್ರಾಣ ಪ್ರತಿಷ್ಠಾಪನೆ: 22 ರಂದು ರುದ್ರಪೂಜೆ, ಸತ್ಸಂಗ

ಬೀದರ್: ಆರ್ಟ್ ಆಫ್ ಲಿವಿಂಗ್ ವತಿಯಿಂದ ಸೋಮನಾಥ ಜ್ಯೋತಿರ್ಲಿಂಗದ ಪುನಃ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ನಗರದ ಚಿಟ್ಟಾ ಕ್ರಾಸ್ ಸಮೀಪದ ಗುಂಪಾ ಬಳಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ಫೆ. 22 ರಂದು ಬೆಳಿಗ್ಗೆ 9ಕ್ಕೆ ರುದ್ರ ಪೂಜೆ, ಜ್ಯೋತಿರ್ಲಿಂಗ ದರ್ಶನ ಹಾಗೂ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದಿವ್ಯಪಾದ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಪೂಜೆ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 12ಕ್ಕೆ ಮಹಾ ಪ್ರಸಾದ ವಿತರಣೆ ನಡೆಯಲಿದೆ ಎಂದು ಆರ್ಟ್ ಆಫ್ ಲಿವಿಂಗ್ ಜಿಲ್ಲಾ ಅಭಿವೃದ್ಧಿ ಸಮಿತಿ ಸದಸ್ಯ ಕಾಮಶೆಟ್ಟಿ ಚಿಕ್ಕಬಸೆ ತಿಳಿಸಿದ್ದಾರೆ.
ಜಿಲ್ಲೆಯ ಭಕ್ತರು ಸೋಮನಾಥ ಜ್ಯೋತಿರ್ಲಿಂಗದ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ, ಪುನೀತರಾಗಬೇಕು ಎಂದು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಕಾಮಶೆಟ್ಟಿ ಚಿಕ್ಕಬಸೆ (7022513111) ಅಥವಾ ಆರ್ಟ್ ಆಫ್ ಲಿವಿಂಗ್ ಜಿಲ್ಲಾ ಸಂಯೋಜಕ ಶಿವಾನಂದ ಮಡಿವಾಳ (7259838372) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!