Popular Posts

ಡಾ.ಎಂ.ಹೆಚ್.ಮರೀಗೌಡರ ವೈಜ್ಞಾನಿಕ ಕೃಷಿ ಪದ್ಧತಿ ಪ್ರಸಾರದಲ್ಲಿನ ಸೇವೆ ಅನನ್ಯ: ಡಾ. ಎಸ್.ವಿ.ಪಾಟೀಲ್

ಬೀದರ, ಆಗಸ್ಟ್ 09 (ಕಕ ವಾರ್ತೆ) : ಬೀದರ ಜಿಲ್ಲೆಯ “ಡಾ.ಎಂ.ಹೆಚ್.ಮರೀಗೌಡ ಅವರು ಕರ್ನಾಟಕದಲ್ಲಿ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದ ಮಹನೀಯರಾಗಿದ್ದಾರೆ. ರೈತಪರ ಯೋಜನೆಗಳು, ಗುಣಮಟ್ಟದ ಸಸಿಗಳ ಉತ್ಪಾದನೆ, ತೋಟಗಾರಿಕೆ ಬೆಳೆಗಳ ವಿಸ್ತರಣೆ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳ ಪ್ರಸಾರದಲ್ಲಿ ಅವರ ಸೇವೆ ಅನನ್ಯವಾಗಿದೆ” ಎಂದು ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಅವರು ಹೇಳಿದರು.

ಬೀದರ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಓSS) ಘಟಕದ ಸಂಯುಕ್ತಾಶ್ರಯದಲ್ಲಿ “ಡಾ.ಎಂ.ಹೆಚ್.ಮರೀಗೌಡರ” 110ನೇ ಜನ್ಮದಿನದ ನಿಮಿತ್ತ ಏರ್ಪಡಿಸಲಾಗಿದ್ದ “ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ತೋಟಗಾರಿಕೆ ಕ್ಷೇತ್ರವು ಹವಾಮಾನ ವೈಪರೀತ್ಯ, ನೀರಿನ ಕೊರತೆ, ಉತ್ಪಾದನಾ ವೆಚ್ಚದ ಹೆಚ್ಚಳ ಹಾಗೂ ಮಾರುಕಟ್ಟೆ ಸವಾಲುಗಳನ್ನು ಎದುರಿಸುತ್ತಿದ್ದರೂ, ಆಧುನಿಕ ತಂತ್ರಜ್ಞಾನ, ಸೂಕ್ಷ್ಮ ನೀರಾವರಿ, ಸಂರಕ್ಷಿತ ಕೃಷಿ, ಮೌಲ್ಯವರ್ಧನೆ, ಸಂಸ್ಕರಣೆ ಮತ್ತು ರಫ್ತು ಅವಕಾಶಗಳ ಮೂಲಕ ಉತ್ತಮ ಬೆಳವಣಿಗೆಯ ಸಾಧ್ಯತೆಗಳಿವೆ” ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಂಡು, ತಂತ್ರಜ್ಞಾನವನ್ನು ರೈತರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ತೋಟಗಾರಿಕೆ ಕ್ಷೇತ್ರದಲ್ಲಿ ಗುಣಮಟ್ಟದ ಉತ್ಪಾದನೆ, ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆ, ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆ ಹಾಗೂ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು. ಜೊತೆಗೆ, ಅತೀ ಕಡಿಮೆ ಫಲವತ್ತತೆಯುಳ್ಳ ಜಮೀನಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆದು ರೈತರು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಗತಿಪರ ರೈತ ವೈಜನಾಥ ನಿಡೋದ ಅವರು ಮಾತನಾಡಿ, “ದೇಶದಲ್ಲಿಯೇ ಅತಿ ಹೆಚ್ಚು ತೋಟಗಾರಿಕಾ ಕ್ಷೇತ್ರವನ್ನು ಹೊಂದಿರುವಂತಹ ರಾಜ್ಯವನ್ನಾಗಿಸಲು ಶ್ರಮಿಸಿದ ಖ್ಯಾತಿ ಡಾ.ಎಂ.ಹೆಚ್. ಮರೀಗೌಡ ಅವರಿಗೆ ಸಲ್ಲುತ್ತದೆ. ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ತೋಟಗಾರಿಕೆ ಇಲಾಖೆಯನ್ನು ಕೃಷಿ ಇಲಾಖೆಗೆ ಸಮನಾಗಿ ಪ್ರಾರಂಭಿಸಿದ ಹಾಗೂ ಬೆಂಗಳೂರು ನಗರವನ್ನು ‘ಉದ್ಯಾನನಗರಿ’ಯನ್ನಾಗಿ ಮಾಡಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಅನೇಕ ತಳಿಯ ಹೊಸ ಸೊಪ್ಪಿನ ಬೀಜಗಳು ಮತ್ತು ಗಿಡಗಳು ರೈತರಿಗೆ ಉಚಿತವಾಗಿ ದೊರಕುವ ವ್ಯವಸ್ಥೆಯನ್ನು ಅವರು ಮಾಡಿಕೊಟ್ಟಿದ್ದರು” ಎಂದರು.

ತೋಟಗಾರಿಕೆ ಉತ್ಪನ್ನಗಳ ಮಾರಾಟ ಮತ್ತು ಸಂಸ್ಕರಣಾ ಘಟಕಗಳನ್ನು ಹುಟ್ಟುಹಾಕಿ, ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ತೋಟಗಾರಿಕಾ ಉತ್ಪಾದಕರ ಸಹಕಾರಿ ಮಾರಾಟ ಮಳಿಗೆ ಮತ್ತು ಸಹಕಾರ ಸಂಘ (ಹಾಪ್‍ಕಾಮ್ಸ್)ಗಳನ್ನು ಸ್ಥಾಪಿಸಲು ಅವರು ಕಾರಣೀಭೂತರಾದರು. ಕೇವಲ ದಿನಾಚರಣೆಯನ್ನು ಆಚರಿಸಿದರೆ ಸಾಲದು, ಪ್ರತಿ ವರ್ಷ ಪ್ರತಿಯೊಬ್ಬರೂ ಕನಿಷ್ಠ ಒಂದೆರಡು ಹಣ್ಣಿನ ಗಿಡಗಳನ್ನು ಬೆಳೆಸಿದರೆ ಇಂತಹ ಕಾರ್ಯಕ್ರಮಗಳನ್ನು ಆಚರಿಸುತ್ತಿರುವುದು ಸಾರ್ಥಕವಾಗುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ವೇದಿಕೆಯ ಮೇಲಿದ್ದ ಗಣ್ಯರು ಡಾ.ಎಂ.ಹೆಚ್.ಮರೀಗೌಡ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ, ಪುμÁ್ಪರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಪ್ರಥಮ ವರ್ಷದ ಬಿ.ಎಸ್‍ಸಿ. (ಆನರ್ಸ್) ತೋಟಗಾರಿಕೆ ವಿದ್ಯಾರ್ಥಿಗಳಾದ ವಿಜಯಲಕ್ಷ್ಮೀ ಮತ್ತು ಸ್ವಾದೀನ ಇವರು ಡಾ.ಎಂ.ಹೆಚ್.ಮರೀಗೌಡ ಅವರ ಜೀವನ ಚರಿತ್ರೆ ಮತ್ತು ತೋಟಗಾರಿಕಾ ಕ್ಷೇತ್ರದ ಸಾಧನೆಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ವಿಜಯಮಹಾಂತೇಶ, ಡಾ.ರಮೇಶ, ನಿವೃತ್ತ ವೈದ್ಯಾಧಿಕಾರಿ ಹಾಗೂ ಪ್ರಗತಿಪರ ರೈತರಾದ ಡಾ.ಹನುಮಶೆಟ್ಟಿ, ಡಾ.ಕವಳೆ ನಾಗೇಂದ್ರ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ, ಕಾರ್ಮಿಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ವರ್ಷದ ಬಿ.ಎಸ್‍ಸಿ. ವಿದ್ಯಾರ್ಥಿನಿ ಭಾಗ್ಯಶ್ರೀ ಬೆಲ್ಲದ ಪ್ರಾರ್ಥಿಸಿದರು, ಗಣೇಶ.ಡಿ ಸ್ವಾಗತಿಸಿದರು, ಕು.ಸುಪ್ರಿಯಾ ಟಿ. ಕಾರ್ಯಕ್ರಮ ನಿರೂಪಿಸಿದರು ಮತ್ತು ಅನುμÁ್ಕ ಬಿ. ವಂದಿಸಿದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading