Popular Posts

ನೂತನ ಕಾರ್ಮಿಕ ನೀತಿ ವಿರೋಧಿಸಿ ದೇಶಾದ್ಯಂತ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ ಗೂ ಅಧಿಕ ಮಂದಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

ಇದೇ ಫೆಬ್ರವರಿ 12 ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದರಿಂದಾಗಿ ಬ್ಯಾಂಕಿಂಗ್ ಮತ್ತು ವಿದ್ಯುತ್ ಸೇವೆಗಳಲ್ಲಿ ತೀವ್ರ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.

ಇದಲ್ಲದೆ ಈ ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು ಪರಿಣಾಮ ವಿಮೆ, ವಿದ್ಯುತ್, ಸಾರಿಗೆ, ಆರೋಗ್ಯ, ಶಿಕ್ಷಣ, ಅನಿಲ ಮತ್ತು ನೀರು ಸರಬರಾಜು ಸೇರಿದಂತೆ ಹಲವು ಸೇವೆಗಳಲ್ಲಿ ಭಾಗಶಃ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ. ಈ ಜಂಟಿ ವೇದಿಕೆಯಲ್ಲಿ INTUC, AITUC, HMS, CITU, AIUTUC, SEWA, AICCTU, LPF ಮತ್ತು UTUC ಸೇರಿವೆ.

“ಫೆಬ್ರವರಿ 12 ರಂದು ರಾಷ್ಟ್ರವ್ಯಾಪಿ ಮುಷ್ಕರ ಕರೆಯಿಂದಾಗಿ ವಿದ್ಯುತ್, ಬ್ಯಾಂಕಿಂಗ್, ವಿಮೆ, ಸಾರಿಗೆ, ಆರೋಗ್ಯ, ಶಿಕ್ಷಣ, ಅನಿಲ ಮತ್ತು ನೀರು ಸರಬರಾಜಿನಲ್ಲಿನ ಎಲ್ಲಾ ಸೇವೆಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಈ ಹಿಂದೆ “ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಕಾರ್ಪೊರೇಟ್ ಪರ ನೀತಿಗಳಿಗೆ ಪ್ರತಿರೋಧ” ದಾಖಲಿಸಲು ಕಾರ್ಮಿಕ ಸಂಘಗಳ ಗುಂಪು ಜನವರಿ 9 ರಂದು ಮುಷ್ಕರಕ್ಕೆ ಕರೆ ನೀಡಿತ್ತು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading