Popular Posts

ಫೆಬ್ರವರಿ 21ರಂದು “ಕಲಬುರಗಿ ನಾಟಕೋತ್ಸವ-26” ಉದ್ಘಾಟನೆ

ಕಲಬುರಗಿ,ಫೆ.20.(ಕ.ವಾ.)-ಕಲಬುರಗಿ ನಾಟಕೋತ್ಸವ-26ನ್ನು ಇದೇ ಫೆಬ್ರವರಿ 21 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ಕಲಬುರಗಿ ನಾಟಕೋತ್ಸವದ ಉದ್ಘಾಟನಾ ಸಮಾರಂಭವು ಫೆಬ್ರವರಿ 21 ರಂದು ಶನಿವಾರ ಸಂಜೆ 5.30 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜರುಗಲಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ನಾಟಕೋತ್ಸವ-26ನ್ನು ಉದ್ಘಾಟಿಸುವರು.
ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ್ ಪಾಟೀಲ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading