Popular Posts

ಫೆ.೨೩ರಂದು ಮಹಿಳಾ ನೌಕರರ ಸಂಘ ಉದ್ಘಾಟನೆ ಹಾಗೂ ಜಿಲ್ಲಾ ಸಮ್ಮೇಳನ ಆಯೋಜನೆ: ಪಾರ್ವತಿ ಸೋನಾರೆ

ಬೀದರ್: ಈ ತಿಂಗಳ ೨೩ರಂದು ಸೋಮವಾರ ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮAದಿರದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರ ಸಂಘ ಬೀದರ್ ಜಿಲ್ಲಾ ಘಟಕ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸರಕಾರದ ಯೋಜನೆಗಳ ಅನುಷ್ಠಾನ ಮತ್ತು ಆಡಳಿತದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷೆ ಪಾರ್ವತಿ ಸೋನಾರೆ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿರುವ ಅವರು,  ಅನುಭವ ಮಂಟಪದ ಅಧ್ಯಕ್ಷರು ಆದ ನಾಡೋಜ ಪೂಜ್ಯ ಡಾ ಬಸವಲಿಂಗ ಪಟ್ಟದೇವರು ಸಾನಿಧ್ಯ ವಹಿಸಲಿದ್ದು, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಸಮಾರಂಭ ಉದ್ಘಾಟಿಸುವರು. ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವರು ಮತ್ತು ಬೀದರ್ ಜಿಲ್ಲಾ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ್ ಖಂಡ್ರೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪೌರಾಡಳಿತ ಸಚಿವ ರಹಿಮ್ ಖಾನ್, ಸಂಸದ ಸಾಗರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ, ಔರಾದ್ ಶಾಸಕ ಪ್ರಭು ಚೌಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಹುಮ್ನಾಬಾದ್ ಶಾಸಕ ಡಾ ಸಿದ್ದಲಿಂಗಪ್ಪ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್, ಶಶಿಲ್ ಜಿ ನಮೋಶಿ, ಭೀಮರಾವ್ ಪಾಟೀಲ್. ಎಂ.ಜಿ ಮುಳೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಬೂಡಾÀ ಅಧ್ಯಕ್ಷ ಬಸವರಾಜ ಜಾ¨ಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಗಿರೀಶ ಬದೌಲೆ, ಎಸ್.ಪಿ ಪ್ರದೀಪ ಗುಂಟೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಬಿರಾದಾರ್ ಚಿದ್ರಿ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಷನಿ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕಲಾ ಕೆ, ಕೋಶಾಧ್ಯಕ್ಷೆ ಡಾ ವೀಣಾ ಕೃಷ್ಣಮೂರ್ತಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಸುರೇಖಾ, ರಾಯಚೂರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸಿಂಧು ರಘು ಎಚ್ ಎಸ್, ಸಿದ್ದಾರೆಡ್ಡಿ ಫೌಂಡೇಶನ್ ಗೌರವಾಧ್ಯಕ್ಷೆ ಎಡಾ.ಗುರಮ್ಮ ಸಿದ್ದಾರೆಡ್ಡಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಗೋರವಾಲೆ ಚಂದ್ರಶೇಖರ್, ನಗರ ಸಭೆ ಸದಸ್ಯ ಡಿಗಂಬರ ಮಡಿವಾಳ, ಮಡಿವಾಳ ಸಮಾಜದ ಮುಖಂಡ ವೆಂಕಟೇಶ ಹಳುವಾಡಿ, ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಪ್ರಸಾದ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಅಕ್ಕ ಪಡೆಯ ರಾಜ್ಯ ಸಂಯೋಜಕಿ ಶೈನಿ ಪ್ರದೀಪ ಗುಂಟಿ, ಔರಾದ್ ತಾಲೂಕು ವೈದ್ಯಾಧಿಕಾರಿ ಗಾಯತ್ರಿ ವಿಜಂiÀiಕುಮಾರ ಹಾಗೂ ಜ್ಯುನಿಯರ್ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಸೆಕೆಂಡ್ ರನ್ನರ್ ಆದ ಪೂರ್ವಿ ಸಂಜಯಕುಮಾರ ಅವರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಸನ್ಮಾನಿಸಲಾಗುವುದೆಂದು ತಿಳಿಸಿದರು.
ಈಗಾಗಲೇ ನಮ್ಮ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಒಂದು ದಿನದ ಮಟ್ಟಿಗೆ ಋತುಚಕ್ರ ರಜೆ ಘೋಷಣೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಹಾಲುಣಿಸುವ ತಾಯಿಂದಿರಿಗೆ ಆಯಾ ಕಚೇರಿಗಳಲ್ಲಿ ವಿಶ್ರಾಂತಿ ಕೋಣೆ ಒದಗಿಸಬೇಕು, ಎಲ್ಲ ಜಿಲ್ಲಾ ಹಾಗೂ ತಾಲೂಜಕು ಕೇಂದ್ರಗಳಲ್ಲಿ ಅಖಿಲ ಕರ್ನಟಕ ಮಹಿಳಾ ನೌಕರರಿಗೆ ಕಚೇರಿ ಒದಗಿಸಬೇಕು ಅಲ್ಲದೇ ಗರ್ಭಿಣಿ ನೌಕರಸ್ತರಿಗೆ ಒಂಬತ್ತು ತಿಂಗಳು ಅವರು ಚಿಕಿತ್ಸೆಗೆ ತೆರಳಲು ೯ ದಿನ ಆರೋಗ್ಯ ಚಿಕಿತ್ಸೆ ಒದಗಿಸಬೇಕೆಂದು ಸ,ಮ್ಮೇಳನದಲ್ಲಿ ಪ್ರಸ್ತಾಪಿಸಲಾಗುವುದು. ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಸರ್ಕಾರದಿಂದ ಹಾಜರಾತಿ ಪತ್ರ, ನೀಡಲಾಗುವುದು. ಈಗಾಗಲೇ ಈ ಸಂಬAಧ ಈಗಾಗಲೇ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಒಂದು ದಿನದ ವಿಶೇಷ ಸಾಂದರ್ಭಿಕ ರಜೆ(ಒಒಡಿ) ಮಂಜುರು ಮಾಡಿ ಆದೇಶ ಹೊರಡಿಸಿದ್ದು, ಎಲ್ಲ ಮಹಿಳಾ ನೌಕರರು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪಾರ್ವತಿ ಸೋನಾರೆ ಮನವಿ ಮಾಡಿದರು.
ಸಂಘದ ಉಪಾಧ್ಯಕ್ಷೆ ವಿಜಯಶೀಲಾ, ಪ್ರಧಾನ ಕಾರ್ಯದರ್ಶಿ ಗೀತಾ ಗಡ್ಡಿ, ಖಜಾಂಚಿ ಪದ್ಮಾ, ಕಾರ್ಯದರ್ಶಿ ಅಶ್ವಿನಿ, ಸದಸ್ಯರಾದ ರೇಣುಕಾ, ಸುಧಾ.ಜಿ ಹಾಗೂ ಇತರರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading