Popular Posts

ಫೆ.23 ಹಾಗೂ 24 ರಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳು ಪ್ರವಾಸ

ಬೀದರ, ಫೆಬ್ರವರಿ.18 :- ಡಾ. ಮೂರ್ತಿ ಎಲ್ ಅಧ್ಯಕ್ಷರು, ಮಾನ್ಯ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಬೆಂಗಳೂರು ಹಾಗೂ ಸದಸ್ಯರುಗಳ ಅವರು ಬೀದರ ಜಿಲ್ಲೆಗೆ ದಿನಾಂಕ: 23-02-2026 ಮತ್ತು 24-02-2026 ರಂದು ಎರಡು ದಿಸವ ಪ್ರವಾಸ ಕೈಗೊಂಡು ದಿನಾಂಕ: 24-02-2026 ಮದ್ಯಾಹ್ನ 3:00 ಗಂಟೆಗೆ ಡಾ|| ಮೂರ್ತಿ ಎಲ್ ಅಧ್ಯಕ್ಷರು ಮಾನ್ಯ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಭೆಯನ್ನು ನಿಗದಿಪಡಿಸಿರುತ್ತಾರೆಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಗಳ ವಿವರ: ಫೆಬ್ರವರಿ.23 ರಂದು ಬೆಳಿಗ್ಗೆ 10 ಗಂಟೆಗೆ ಬೀದರ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ/ವಸತಿ ಶಾಲೆಗಳಿಗೆ ಹಾಗೂ ವಿವಿಧ ಪರಿಶಿಷ್ಟ ಜಾತಿಯ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಸ್ಥಳ ಪರಿಶೀಲನೆ ಮಾಡಲಿದ್ದಾರೆ.
ಫೆಬ್ರವರಿ.24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಬೀದರ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು, ಲೋಕ ಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ದಲಿತ ಮುಖಂಡರುಗಳೊAದಿಗೆ ಕುಂದು ಕೊರತೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 2.30 ಗಂಟೆಗೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಹಾಗೂ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳ ಸಭೆ ನಡೆಸಲಿದ್ದಾರೆಂದು ಅವರು ತಿಳಿಸಿದ್ದಾರೆ.
*****

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading