ಬೀದರ, ಫೆಬ್ರವರಿ.18 :- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ಇದರ ಹದಿನೈದನೆಯ ಘಟಿಕೋತ್ಸವ ಫೆಬ್ರವರಿ.27 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸನ್ಮಾನ್ಯ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪಸ್ಥಿತಿ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಕೆ.ವೆಂಕಟೇಶ್ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೈದ್ರಾಬಾದ ಇಕ್ರಿಸ್ಯಾಟ್ ಮಹಾನಿರ್ದೇಶಕ ಡಾ.ಹಿಮಾಂಶು ಪಾಠಕ ಅವರು ಘಟಿಕೋತ್ಸವ ಭಾಷಣ ಮಂಡಿಸಲಿದ್ದಾರೆ.
Discover more from ಕಲಿಯುಗದ ಕೂಗು
Subscribe to get the latest posts sent to your email.