1
1

ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್. ಅವರು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಾರಿಗೆ ಬರುವಂತೆ ಹೊರಡಿಸಿದ ಆದೇಶದನ್ವಯ, ಈ ಹಿಂದೆ ಸೇವೆಯಲ್ಲಿದ್ದ ಶಿವಾನಂದ ಬಿ. ಕರಾಳೆ ಅವರು ನೂತನ ಅಪರ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (KKRDB) ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುರೇಖಾ ಅವರು, ಈ ಹಿಂದೆ ಬೀದರ್ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಅವಧಿಯಲ್ಲಿಯೂ ಕೆಲ ದಿನಗಳ ಕಾಲ ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಇದೀಗ ಪೂರ್ಣ ಪ್ರಮಾಣದಲ್ಲಿ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇದೇ ವೇಳೆ, ವರ್ಗಾವಣೆಗೊಂಡಿರುವ 2010ನೇ ಸಾಲಿನ ಕೆಎಎಸ್ ಅಧಿಕಾರಿ ಶಿವಾನಂದ ಬಿ. ಕರಾಳೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.
ಅಧಿಕಾರ ಸ್ವೀಕರಿಸಿದ ನೂತನ ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಬೀದರ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹೂ- ಗುಚ್ಚ ನೀಡಿ ಶುಭ ಕೋರಿದರು.
Subscribe to get the latest posts sent to your email.