ಬೀದರ, ಆಗಸ್ಟ್ 12 (ಕಕ ವಾರ್ತೆ) : ತೆಲಂಗಾಣದ ಜಹೀರಾಬಾದ್ ಬಳಿ ಆಗಸ್ಟ್ 11 ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಬ್ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೀದರ ತಾಲೂಕಿನ ರಾಜಗೀರಾ ಗ್ರಾಮದ ಕೂಲಿ ಕಾರ್ಮಿಕರನ್ನು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಭೇಟಿಯಾಗಿ ಸಾಂತ್ವನ ಹೇಳಿದರು.
ಅಪಘಾತದಲ್ಲಿ ಮೃತಪಟ್ಟವರ 6 ಜನ ಬಡ ಕೂಲಿ ಕಾರ್ಮಿಕರ ಕುಟುಂಬಸ್ತರಿಗೆ ಮುಖ್ಯ ಮುಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ಚಿಕಿತ್ಸೆ ಸಂಪೂರ್ಣ ಸರಕಾರ ಭರಿಸಲಾಗುವುದು, ಎಲ್ಲ ರೀತಿಯ ಸಹಕಾರ ನೀಡಲಾಗುವುದೆಂದು ಸಾಂತ್ವನ ನೀಡಿದರು.
Discover more from ಕಲಿಯುಗದ ಕೂಗು
Subscribe to get the latest posts sent to your email.