1
1

ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಯು.ಎಸ್.ಎ.ದ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕøತ ಹಾವಗಿಲಿಂಗೇಶ್ವರ ಶಿವಾಚಾರ್ಯರಿಗೆ ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ಫೆ. 15 ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಬೆಳಿಗ್ಗೆ 11.30ಕ್ಕೆ ಸಮಾರಂಭ ಜರುಗಲಿದೆ.
ಗ್ರಾಮಸ್ಥರ ವತಿಯಿಂದ ಸಮಾರಂಭ ಸಂಘಟಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರಾಚೋಟೇಶ್ವರ ಸಂಸ್ಥಾನ ಮಠದ ಪ್ರಕಟಣೆಯಲ್ಲಿ ಕೋರಲಾಗಿದೆ.