1
1

ಬೀದರ್: ವಿದ್ಯಾರ್ಥಿಗಳು ಆರೋಗ್ಯಪೂರ್ಣ ಜೀವನಕ್ಕಾಗಿ ಮಾದಕ ವಸ್ತುಗಳಿಂದ ದೂರ ಇರಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರೇರಕ ಭಾಷಣಕಾರ ಬಿ.ಕೆ. ಪಿಯುಷ್ ಹೇಳಿದರು.
ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಎನ್.ಎಸ್.ಎಸ್. ಘಟಕ ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಕೇಂದ್ರ ಪಾವನಧಾಮ ವತಿಯಿಂದ ಗುರುವಾರ ಆಯೋಜಿಸಿದ್ದ ವ್ಯಸನ ಮುಕ್ತ ಭಾರತ ಅಭಿಯಾನ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮaದೇಶವನ್ನು ಮಾದಕ ವ್ಯಸನಗಳಿಂದ ಮುಕ್ತಗೊಳಿಸಲು ವ್ಯಸನ ಮುಕ್ತ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಅಭಿಯಾನದ ಪ್ರತಿಜ್ಞೆ ಬೋಧಿಸಿದರು.
ಪ್ರಾಚಾರ್ಯೆ ಶೈಲಜಾ, ಎಲ್ಲ ವಿಭಾಗಗಳ ಮುಖ್ಯಸ್ಥರು, ಎನ್.ಎಸ್.ಎಸ್, ರೆಡ್ ಕ್ರಾಸ್, ಯೋಗ, ಎನ್.ಸಿ.ಸಿ. ಎಸ್.ಡಬ್ಲ್ಯೂ.ಒ. ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
Subscribe to get the latest posts sent to your email.