ಬೀದರ, ಫೆಬ್ರವರಿ.09 :- ಹದಿನೆಂಟು ವರ್ಷದ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡಬಾರದೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ತಿಳಿಸಿದರು.
ಅವರು ಸೋಮವಾರ ನಗರದ ನೌಬಾದನ ಶಾರಧಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ ಹಾಗೂ ಜೀತ ಕಾರ್ಮಿಕ ಪದ್ದತಿ ನಿರ್ಮೂಲನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪಾಲಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೆ ಶಾಲೆಗೆ ಕಳುಹಿಸಬೇಕು. ತಮಗೆ ಯಾವುದೇ ಮಗು ಕೆಲಸ ಮಾಡುವುದು ಕಂಡುಬAದಲ್ಲಿ 1098ಕ್ಕೆ ಕರೆ ಮಾಡಿ ತಿಳಿಸಬೇಕೆಂದರು.
ಬೀದರ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷö್ಮಣ ಕುಳಲಿ ಮಾತನಾಡಿ, ಬಾಲ ಕಾರ್ಮಿಕ ಪದ್ದತಿ ಹಾಗೂ ಜೀತ ಕಾರ್ಮಿಕ ಪದ್ದತಿ ಇದೊಂದು ಅನಿಷ್ಠ ಪದ್ದತಿಯಾಗಿದ್ದು ಇವರ ನಿರ್ಮೂನೆಗಾಗಿ ಎಲ್ಲರು ಕೈಜೋಡಿಸಬೇಗಾಗಿ ಕರೆ ನಿಡೀದರು.
ಬೀದರ ವಕೀಲ ಶಿವಶರಣಪ್ಪ ಪಾಟೀಲ್ ಅವರು ತಮ್ಮ ಉಪನ್ಯಾಸ ನುಡಿಯಲ್ಲಿ ಬಾಲ ಕಾರ್ಮಿಕ ಪದ್ದತಿ ಹಾಗೂ ಜಿತ ಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡುವದರ ಜೋತೆಗೆ ಪರಿಸರ ರಕ್ಷಣೆ ಬಗ್ಗೆ “ಪರಿಸರ ರಕ್ಷಣೆ ನಮ್ಮ ನಿಮ್ಮೇಲ್ಲ ಹೋಣೆ” ಎಂದು ತಿಳಿಸಿದರು.
ಬೀದರನ ಶಾರಧಾ ಪ್ರೌಢಶಾಲೆಯ ಮುಖ್ಯ ಗುರುಗಳು ಅನಿತಾ ಬೀರಾದರ ಮಾತನಾಡಿ, ನ್ಯಾಯಧೀಶರ ಹಾಗೂ ಎಲ್ಲಾ ಗಣ್ಯ ವ್ಯಕ್ತೀಗಳ ಹಿತನೂಡಿಯನ್ನು ಮಕ್ಕಳು ಪಾಲಿಸಿಕೊಂಡು ತಮ್ಮ ಜಿವನದಲ್ಲಿ ಒಳ್ಳೆವ್ಯಕ್ತೀಗಳಾಗಲು ಸಹಕರಿಯಾಗುವದೆಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯರ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ಅವರುಗಳು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು, ಹಾಗೂ ಜೀತ ಪದ್ಧತಿ ನಿರ್ಮೂಲನೆ ಕುರಿತು ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೀದರ ವಕೀಲರ ಸಂಘ, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಯೋಜನಾ ನಿರ್ದೇಶಕರು ಬಾಲ ಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ ಸಿಬ್ಬಂದಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಬ್ದುಲ ಹಫೀಜ, ವಿಧ್ಯಸಾಗರ ಎಲ್.ಎ.ಡಿ.ಸಿ ವಕೀಲರು, ಸಿಬ್ಬಂದಿಗಳು ಹಾಗೂ ಕಾರ್ಮಿಕ ಇಲಾಖೆ ಸಿಬ್ಬಂಧಿವರ್ಗದವರು ಮತ್ತು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Related