ಬೀದರ್: ಆಗಸ್ಟ್ 13, (ಕಕ ವಾರ್ತೆ) 80ನೇ ಸ್ವತಂತ್ರೋತ್ಸವ ಹಾಗೂ ಹರ ಘರ್ ತಿರಂಗಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನೌಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಗಸ್ಟ್ 14 ರಂದು ಬೆಳಗ್ಗೆ 8 ಗೆ ಬೈಕ್ ರ್ಯಾಲಿಗೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಅಧ್ಯಕ್ಷತೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ಜರುಗಿತು.
ನಗರದಲ್ಲಿ 80ನೇ ಸ್ವತಂತ್ರೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹರ ಘರ್ ತಿರಂಗಾ, ಭಾರತ್ ಜೋಡೊ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಆಗಸ್ಟ್ 14ರಂದು ಬೆಳಗ್ಗೆ 8 ಗಂಟೆಗೆ ಬೀದರ್ ಕೋಟೆ ಮುಖ್ಯ ದ್ವಾರದ ಎದುರು ಬೈಕ್ ರ್ಯಾಲಿಗೆ ಚಾಲನೆ ನೀಡಲಾಗುವುದು ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡುವರು.
ಬೈಕ್ ರಾಲಿಯು ಚೌಬಾರ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಬರೀದ್ ಶಾಹಿ ಗಾರ್ಡನ್ ತಲುಪುವುದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೈಕ್ ಗಳ ಜೊತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುಬೇಕು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುರೇಶ್ ಚನ್ನಶೆಟ್ಟಿ, ಹಿರಿಯ ಪತ್ರಕರ್ತರಾದ ಶಿವಶರಣಪ್ಪ ವಾಲಿ, ಕಲಾವಿದರಾದ ಮಾರುತಿ ಸೋನಾರೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
Discover more from ಕಲಿಯುಗದ ಕೂಗು
Subscribe to get the latest posts sent to your email.