Popular Posts

ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನ: ಪೊಲೀಸ್ ಇಲಾಖೆಗೆ 501 ಹೆಲ್ಮೆಟ್ ಕೊಡುಗೆ

ಬೀದರ್: ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನದ ನಿಮಿತ್ತ ಸಮಿತಿಯು ಜಿಲ್ಲಾ ಪೊಲೀಸ್ ಇಲಾಖೆಗೆ 501 ಹೆಲ್ಮೆಟ್‍ಗಳನ್ನು ಕೊಡುಗೆಯಾಗಿ ನೀಡಲು ನಿರ್ಧರಿಸಿದೆ.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ (ಆ.26) ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಇಲಾಖೆಗೆ ಹೆಲ್ಮೆಟ್ ಹಸ್ತಾಂತರಿಸಲಾಗುವುದು ಎಂದು ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ತಿಳಿಸಿದ್ದಾರೆ.
ಸಂಸದ ಸಾಗರ್ ಖಂಡ್ರೆ ಸಮಾರಂಭವನ್ನು ಉದ್ಘಾಟಿಸುವರು. ಹುಲಸೂರಿನ ಡಾ. ಶಿವಾನಂದ ಸ್ವಾಮೀಜಿ, ಹಲಬರ್ಗಾದ ಹಾವಗಿಲಿಂಗೇಶ್ವರ ಶಿವಾಚಾರ್ಯ ಹಾಗೂ ಮಳಚಾಪುರದ ಸದ್ರೂಪಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು ಎಂದು ಹೇಳಿದ್ದಾರೆ.
ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಬೀದರ್ ಡಿವೈಎಸ್‍ಪಿ ದೂಧ್‍ಪೀರ್ ಹುಸೇನ್ ಸಾಬ್ ಮುಲ್ಲಾ, ಸಂಚಾರ ಠಾಣೆ ಸಿಪಿಐ ಜಿ.ಎಸ್. ಬಿರಾದಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.
ಬೀದರ್‍ನ ಎಸ್‍ಬಿಐ ಎಟಿಎಂ ದರೋಡೆಕೋರರ ಬಂಧನದ ರೂವಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರಿಗೆ ಸಮಿತಿಯಿಂದ ರಾಜ್ಯಮಟ್ಟದ ಶೌರ್ಯ ಪ್ರಶಸ್ತಿ ಹಾಗೂ ಇತರ ಪೊಲೀಸ್ ಅಧಿಕಾರಿಗಳಿಗೆ ಗೌರವ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading