Popular Posts

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆ ಅಡಿಯಲ್ಲಿ ಅಗತ್ಯ ನೆರವು

ಬೀದರ ಜಿಲ್ಲಾ ಪೊಲೀಸ್, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ‘ಆಸರೆ’ ಯೋಜನೆ ಅಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಮತ್ತು ವಯೋವೃದ್ಧ ಹಿರಿಯ ನಾಗರಿಕರಿಗೆ ಅಗತ್ಯ ನೆರವು .ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ “ಆಸರೆ” ಎಂಬ ವಿನೂತನ ಸಮುದಾಯ ಪೊಲೀಸ್ ಉಪಕ್ರಮವನ್ನು ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಮತ್ತು ವಯೋವೃದ್ಧ ಹಿರಿಯ ನಾಗರಿಕರಿಗೆ ಅನುಷ್ಠಾನಗೊಳಿಸಲಾಗಿದೆ. ಅವರ ಜೀವನದಲ್ಲಿ ಕಂಡುಬರುವ ಒಂಟಿತನ, ಅಸುರಕ್ಷತೆ, ಅಭದ್ರತೆ ಹಾಗೂ ಕಾಳಜಿಯ ಕೊರತೆಯನ್ನು ನೀಗಿಸಿ, ಅವರಿಗೆ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮದ ವಿಶ್ವಾಸವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. “ಆಸರೆ” ಯೋಜನೆಯ ಮೂಲಕ ಅವರು ಒಂಟಿಯಲ್ಲ, ಅವರೊಂದಿಗೆ ಪೊಲೀಸ್ ಇಲಾಖೆ ಹಾಗೂ ಸರ್ಕಾರವಿದೆ ಎಂಬ ಬಲವಾದ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಮೂಡಿಸಲಾಗುತ್ತಿದೆ.
ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬೀದರ ಉಪ-ವಿಭಾಗದ ಉಪಾಧೀಕ್ಷಕರಾದ ಶ್ರೀ ದೂದ್ ಪೀರ್ ಹೆಚ್. ಮುಲ್ಲಾ ರವರು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಯವರೊಂದಿಗೆ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಮತ್ತು ವಯೋವೃದ್ಧ ಹಿರಿಯ ನಾಗರಿಕರ ಕುಂದು-ಕೊರತೆಗಳನ್ನು ಆಲಿಸಿ “ಆಸರೆ” ಯೋಜನೆ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!