Popular Posts

ಕನ್ನಡ ಸೇನೆ ಕರ್ನಾಟಕ: ಜಿಲ್ಲಾ ಮಹಿಳಾ ಉಪಾಧ್ಯಕ್ಷರಾಗಿ ಶಿವಲೀಲಾ ನೇಮಕ

ಬೀದರ: ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಶಿವಲೀಲಾ ಬಂಡೇಶ ಪೂಜಾರಿ ಅವರನ್ನು ಜಿಲ್ಲಾ ಮಹಿಳಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಈ ಕುರಿತು ಜಿಲ್ಲಾ ಅಧ್ಯಕ್ಷರಾದ ಸುಭಾಷ್ ಕೆನಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಉಪಾಧ್ಯಕ್ಷರಾದ ಡಾ. ರವಿಸ್ವಾಮಿ ನಿರ್ಣ ಅವರ ಆದೇಶದ ಮೇರೆಗೆ ಈ ನೇಮಕಾತಿ ಜರುಗಿದ್ದು, ಸಂಘಟನೆಯ ಚಟುವಟಿಕೆಗಳನ್ನು ವಿಸ್ತರಿಸುವಲ್ಲಿ ಶಿವಲೀಲಾ ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ ನಾಡು–ನುಡಿ, ನೆಲ–ಜಲಕ್ಕಾಗಿ ಹೋರಾಟವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ನಿಟ್ಟಿನಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಅವರು ಸಂಘಟನೆಯ ಉದ್ದೇಶಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮಹಿಳಾ ವಿಭಾಗವನ್ನು ಬಲಪಡಿಸುವಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading