Popular Posts

ರೇಣುಕಾಚಾರ್ಯ ಜಯಂತಿ ಸ್ವಾಗತ ಸಮಿತಿಗೆ ರಾಜಶೇಖರ ಪಾಟೀಲ ಅಧ್ಯಕ್ಷ

ಬೀದರ್: ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಆಚರಣೆ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಕೇಂದ್ರ ಸಮಿತಿಯ ಕಾರ್ಯಕಾರಿಣಿ ಸದಸ್ಯರೂ ಆದ ಮಾಜಿ ಸಚಿವ ರಾಜಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ನಡೆದ ಸಮಿತಿ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸನ್ಮಾನ: ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ರಾಜಶೇಖರ ಪಾಟೀಲ ಅವರನ್ನು ಬೇಮಳಖೇಡದ ಡಾ. ರಾಜಶೇಖರ ಶಿವಾಚಾರ್ಯ ಹಾಗೂ ಲಾಡಗೇರಿ ಹಿರೇಮಠದ ಗಂಗಾಧರ ಶಿವಾಚಾರ್ಯರ ನೇತೃತ್ವದಲ್ಲಿ ಸಮಿತಿಯ ಪದಾಧಿಕಾರಿಗಳು ಹುಮನಾಬಾದ್‍ನಲ್ಲಿ ಶನಿವಾರ ಸನ್ಮಾನಿಸಿದರು.
ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಸಂತಸ ಉಂಟು ಮಾಡಿದೆ. ಇದು, ಸೇವೆಗೈಯಲು ದೊರೆತ ಅವಕಾಶ. ಎಲ್ಲರ ಸಹಕಾರದೊಂದಿಗೆ ಬೀದರ್‍ನಲ್ಲಿ ಮಾ. 1 ರಂದು ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವವನ್ನು ವೈಭವದಿಂದ ಆಚರಿಸೋಣ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಸಹಕಾರಿ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ಮಲ್ಲಿಕಾರ್ಜುನ ಮಾಶೆಟ್ಟಿ, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಜಂಗಮ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ,  ಪ್ರಮುಖರಾದ ವರದಯ್ಯ ಸ್ವಾಮಿ, ಮಹೇಶ ಪಾಟೀಲ, ಕಾಶಿನಾಥ ಜಕ್ಕಾ, ದಯಾನಂದ ಸ್ವಾಮಿ, ಅಂಬರೀಷ್ ಸ್ವಾಮಿ, ಶಿವಕುಮಾರ ಸ್ವಾಮಿ, ನಾಗಯ್ಯ ಸ್ವಾಮಿ, ಶರಣಯ್ಯ ಸ್ವಾಮಿ, ಚಂದ್ರಕಾಂತ ಚನ್ನಳ್ಳಿ ಮತ್ತಿತರರು ಇದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading