1
1
ಬೀದರ, ಫೆಬ್ರವರಿ.23 :- 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ರೂ. 5 ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿ ಹಾಗೂ ಸಹಾಯಧನಕ್ಕಾಗಿ ಬೀದರ ಜಿಲ್ಲೆಯ ಪರಿಶಿಷ್ಟ ಜಾತಿಯ-07 ಮತ್ತು ಪರಿಶಿಷ್ಟ ಪಂಗಡದ-04 ಆಭ್ಯರ್ಥಿಗಳು ಸೇರಿ ಒಟ್ಟು 11 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಲಾಗಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಿದೆ.
ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರನ ವಯಸ್ಸು 20 ರಿಂದ 55 ವರ್ಷದೊಳಗಿರಬೇಕು. ಅರ್ಜಿದಾರರು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. (ನಿಗಧಿ ಪಡಿಸಿದ ಅಂಕದ ಮಿತಿ 45%). ಅಭ್ಯರ್ಥಿಗಳು ಲಘು ವಾಹನ ಪರವಾನಗಿ ಹೊಂದಿರತಕ್ಕದ್ದು. ನಗರ ಪ್ರದೇಶದ ಫಲಾನುಭವಿಗಳು ವಾರ್ಷಿಕ ಆದಾಯ ರೂ. 2.00 ಲಕ್ಷ ಮಿತಿಯಳಗಿರಬೇಕು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ. 1.50 ಲಕ್ಷ ಮಿತಿಯೊಳಗಿರಬೇಕು. ಅರ್ಜಿದಾರರು ಯಾವ ಜಿಲ್ಲೆಯ ನಿವಾಸಿಯಾಗಿರುತ್ತಾರೋ ಅದೇ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.
ಅರ್ಹರು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ ಕನ್ನಡ ಭವನ, ಚಿಕ್ಕಪೇಟ್, ಬೀದರ್ದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು 2026ನೇ ಮಾರ್ಚ.13 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ ಕನ್ನಡ ಭವನ, ಚಿಕ್ಕಪೇಟ್, ಬೀದರ್ ಕಚೇರಿಗೆ ದ್ವೀಪ್ರತಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೀದರ ರವರ ದೂರವಾಣಿ ಸಂಖ್ಯೆ : 9900549319 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Subscribe to get the latest posts sent to your email.