1
1

ಬೀದರ್: 1995 ರ ನಂತರ ಆರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು ಎಂಬ ಬೇಡಿಕೆ ಈಡೇರಿಕೆ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭರವಸೆ ನೀಡಿದರು.
ನಗರದಲ್ಲಿ ಸೋಮವಾರ ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಈ ಬೇಡಿಕೆ ಕುರಿತು ಹಿಂದೆ ಮುಖ್ಯಮಂತ್ರಿ ಅವರ ಗಮನ ಸೆಳೆದಿದ್ದೇನೆ. ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಈ ಸಂಬಂಧ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು. ಕನ್ನಡ ಉಳಿಸುವಲ್ಲಿ ಕನ್ನಡ ಮಾಧ್ಯಮ ಖಾಸಗಿ ಶಾಲೆಗಳು ವಹಿಸುತ್ತಿರುವ ಮಹತ್ವದ ಪಾತ್ರವನ್ನೂ ವಿವರಿಸಿದರು. ಅನುದಾನಕ್ಕೆ ಒಳಪಡಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.
ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಕಲಬುರಗಿ ವಿಭಾಗದ ಉಪಾಧ್ಯಕ್ಷ ಮಂಜೂರ ಇರ್ಫಾನ್ ಮತ್ತಿತರರು ಇದ್ದರು.