ಬೀದರ, ಫೆಬ್ರವರಿ.23 :- ರಾಜ್ಯ ಸರ್ಕಾರವು ಮಹಿಳಾ ನೌಕರರ ಹಕ್ಕುಗಳ ರಕ್ಷಣೆ, ಕೆಲಸದ ಸ್ಥಳದಲ್ಲಿ ಗೌರವ ಮತ್ತು ಭದ್ರತೆ, ಸಮಾನ ಅವಕಾಶಗಳು ಒದಗಿಸಲು ಸದಾ ಬದ್ಧವಾಗಿದೆ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಅವರು ಸೋಮವಾರ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಬೀದರ ಜಿಲ್ಲಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಆಡಳಿತ ಹಾಗೂ ಸೇವಾ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಅವರ ಶ್ರಮಕ್ಕೆ ತಕ್ಕ ಗೌರವ ಹಾಗೂ ಸೌಲಭ್ಯಗಳು ದೊರಕಬೇಕು ಎಂಬುದು ಸರ್ಕಾರದ ದೃಢ ನಿಲುವು. ಮಹಿಳಾ ನೌಕರರ ಸಂಘವು ಪರಸ್ಪರ ಸಹಕಾರ, ಸಮಸ್ಯೆಗಳ ಪರಿಹಾರ ಹಾಗೂ ಮಹಿಳಾ ಶಕ್ತೀಕರಣಕ್ಕೆ ಬಲವಾದ ವೇದಿಕೆಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದ ಅವರು, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಮಹಿಳಾ ನೌಕರರಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ, ಪೌರಾಡಳಿತ ಸಚಿವರಾದ ರಹಿಂ ಖಾನ್, ಸಂಘದ ಪದಾಧಿಕಾರಿಗಳು, ಮಹಿಳಾ ಸರ್ಕಾರಿ ನೌಕರರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
Discover more from ಕಲಿಯುಗದ ಕೂಗು
Subscribe to get the latest posts sent to your email.