Popular Posts

ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ್, ಆಗಸ್ಟ್ 11 (ಕಕ ವಾರ್ತೆ): ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಉಳಿದ ಖಾಲಿ ಎಂ.ಬಿ.ಬಿ.ಎಸ್ / ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿ ಖಾಲಿಯಿರುವ ಎಂ.ಬಿ.ಬಿ.ಎಸ್ ಮತ್ತು ತಜ್ಞ ವೈದ್ಯರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಅರ್ಹ ಅಭ್ಯರ್ಥಿಗಳ ಸಂದರ್ಶನ ನಡೆಸಿ, ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಬೀದರ್‌ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದರೆ, ಆಸಕ್ತರು 2026ರ ಆಗಸ್ಟ್ 14ರೊಳಗೆ ಕಚೇರಿಯ ವೇಳೆಯಲ್ಲಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಉಳಿದ 1 ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯರ ಹುದ್ದೆಗೆ (ಪರಿಶಿಷ್ಟ ಪಂಗಡ – ಸಾಮಾನ್ಯ) ಹಾಗೂ 2 ಎಂ.ಬಿ.ಬಿ.ಎಸ್ ಖಾಲಿ ಹುದ್ದೆಗಳಿಗೆ (3ಎ – ಸಾಮಾನ್ಯ, 2ಎ – ಗ್ರಾಮೀಣ) ಅರ್ಹ ಅಭ್ಯರ್ಥಿಗಳು 2026ರ ಆಗಸ್ಟ್ 12ರೊಳಗೆ ಕಚೇರಿ ಸಮಯದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading