Popular Posts

ಔರಾದ(ಬಿ) ಬಿಸಿಎಂ ವಿದ್ಯಾರ್ಥಿ ವಸತಿ ನಿಲಯದಲ್ಲಿ ಕಳಪೆ ಆಹಾರ, ಸ್ವಚ್ಛತೆ ಕೊರತೆ ಆರೋಪ

ಬೀದರ್: ಔರಾದ(ಬಿ) ತಾಲೂಕಿನ ಬಿಸಿಎಂ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಸ್ವಚ್ಛತೆಯ ಕೊರತೆಯೂ ಇದೆ ಎಂದು ಆರೋಪಿಸಿ ಇಂದು ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆ ವತಿಯಿಂದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುತ್ತಿಲ್ಲ. ನಿಲಯದ ಆವರಣದಲ್ಲಿ ಅಗತ್ಯ ಸ್ವಚ್ಛತೆ ಕಾಪಾಡದಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರ ಜೊತೆಗೆ, ವಸತಿ ನಿಲಯದ ನಿಯಮಗಳಿಗೆ ವಿರುದ್ಧವಾಗಿ ಸ್ಥಳೀಯ ಗ್ರಾಮದ ಮಕ್ಕಳನ್ನು ವಸತಿ ಮಾಡಿಸಿಕೊಂಡು ನಿಲಯ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಅರ್ಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಆರೋಪಗಳು ಸತ್ಯವೆಂದು ಕಂಡುಬAದಲ್ಲಿ ತಪ್ಪಿತಸ್ಥ ತಾಲೂಕು ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಒದಗಿಸುವುದರ ಜೊತೆಗೆ, ನಿಯಮಾನುಸಾರ ವಸತಿ ನಿಲಯ ನಿರ್ವಹಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಕಲ್ಲಾಣ ಕರ್ನಾಟಕ ನಿರ್ಮಾಣ ಸೇನೆಯ ಸಾಮಾಜಿ ಜಾಲತಾಣ ತಾಲೂಕಾ ಅಧ್ಯಕ್ಷ ದಾವಿದ ಎಕಲರಕರ್, ಜಿಲ್ಲಾ ಸಂಯೋಜಕರು, ಕಮಲ್ ಹಾಸನ್ ಬಾವಿದೊಡ್ಡಿ, ವೆಂಕಟರಾವ್ ಪಾಟೀಲ್, ವಿಶಾಲ ಚೌಹಾಣ, ಸಚೀನ ಗೌಳಿ, ವಿಶಾಲ ಕಮಲನಗರ, ಶಿವರಾಜ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading