Popular Posts

ರೆಡ್ಡಿ ಸಮಾಜದ ಅಭಿವೃದ್ಧಿಗೆ ಹೊಸ ಹೆಜ್ಜೆ: ಹೇಮ-ವೇಮ ಭವನ ಉದ್ಘಾಟನೆ

ಬೀದರ್: ನಗರದ ಗುಂಪಾ ಸಿಂದೋಲ್ ಕಲ್ಯಾಣ ಮಂಟಪದ ಸಮೀಪ ಅಮ್ಲಾಪುರ ಬಳಿ ಆಗಸ್ಟ್ 26ರಂದು ನಡೆಯಲಿರುವ ಉದ್ಘಾಟನಾ ಸಮಾರಂಭಕ್ಕೆ ಸಮಾಜದ ಮುಖಂಡರು, ಹಿರಿಯರು, ಯುವಕರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರೊAದಿಗೆ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಗಳು, ಸಮಾಜದ ಸಂಘಟನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಸಾಮಾಜಿಕ ಚಟುವಟಿಕೆಗಳ ಕುರಿತು ಚರ್ಚಿಸಲಾಯಿತು. ಸಮಾಜದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಮುಖಂಡರು ತಿಳಿಸಿದರು.

ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ರೆಡ್ಡಿ ಸಮಾಜ ಯುವ ಘಟಕದ ಜಿಲ್ಲಾಧ್ಯಕ್ಷ ಸಂತೋಷ್ ರೆಡ್ಡಿ ಮನವಿ ಮಾಡಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading