Popular Posts

ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ, ಫೆಬ್ರವರಿ.12 ):-ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ  ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್.7 ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2027 ರಂತೆ 11ಳಿ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2014 ರಿಂದ 01-07-2015ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. .
ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವ ರೀತಿಯ ವಿಧ್ಯಾಭ್ಯಾಸ/ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98650/-ಗಳು (ಜನರಲ್ ಕೆಟೆಗೆರಿ) ಹಾಗೂ ರೂ 81850/- (ಪ.ಜಾ/ಪ.ಪಂ.) ಗಳಾಗಿರುತ್ತದೆ. ಇದು ಕಾಲ ಕಾಲಕ್ಕೆ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/-ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಸದರಿ ಮೊತ್ತವನ್ನು ವಿಧ್ಯಾರ್ಥಿಯು ಪದವೀಧರನಾದ ಮತ್ತು  ವಿಧ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿಂತಿರುಗಿಸಲಾಗುವುದು.
ಅರ್ಜಿ ನಮೂನೆಗಳನ್ನು ಪಡೆಯುವ ವಿಧಾನ: ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜ್, ಘಡಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ – 248003 ಮೂಲಕ ಪಡೆಯಬಹುದು.
ಬೇಡಿಕೆ ಹುಂಡಿ (ಡಿಡಿ) ಕಳುಹಿಸುವ ಮೂಲಕ: ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಮತ್ತು ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಹುಂಡಿಯನ್ನು  ಲಿಖಿತ ವಿನಂತಿಯ ಜೊತೆಯಲ್ಲಿ ಹಾಗೂ ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು  ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು. “THE COMMANDANT RIMC FUND” PAYABLE AT HDFC BANK, BALLUPUR CHOWK,DEHRADUN (BANK CODE. 1399), UTTARAKHAND. ವಿಳಾಸ, ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟಯಿಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಆರ್‍ಐಎಂಸಿ ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮುನ್ಸಿಪಾಲಿಟಿ/ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 4 ಪಾಸ್‍ಪೋರ್ಟ್ ಸೈಜಿನ ಭಾವಚಿತ್ರಗಳು.(ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ಧೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ ಇರುವಂತೆ ಮಾತ್ರ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ಹೊರ ಜಿಲ್ಲೆಗೆ ರೂ. 56/- ಹಾಗೂ ಬೆಂಗಳೂರು ನಗರ ವ್ಯಾಪ್ತಿಗೆ ರೂ.23/- ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ. ಶಾಲಾ ಪ್ರಾಚಾರ್ಯರು/ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ಧೃಢೀಕರಿಸಿದ ಅಭ್ಯರ್ಥಿಯ  ಭಾವ ಚಿತ್ರದೊಂದಿಗೆ).ಕರ್ನಾಟಕ ರಾಜ್ಯದ ಮೂಲವಾಸಸ್ಥಾನ ಧೃಡೀಕರಣ ಪತ್ರ (ತಹಸೀಲ್ದಾರರಿಂದ). (ಇನ್ ಇಂಗ್ಲೀಷ್ ವರ್ಷನ್ ಮಾತ್ರ). ಆಧಾರ್ ಕಾರ್ಡ್ ಪ್ರತಿ(ಕಡ್ಡಾಯ) ಅಡಕಗಳೊಂದಿಗೆ ದಿನಾಂಕ 05-04-2026 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು – 25, ಇವರಿಗೆ, ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇ.ಮೇಲ್ dirdswrblr@gmail.com,  ದೂರವಾಣಿ ಸಂಖ್ಯೆ: 080-25589459 ಕರೆಮಾಡಬಹುದು ಎಂದು ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ ಕಲಬುರಗಿರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading