Popular Posts

ಮಾರ್ಚ.14 ರಂದು ಬೃಹತ್ ಲೋಕ ಅದಾಲತ್-ನ್ಯಾ.ಎಸ್.ಬಿ.ರಹಮಾನ

ಬೀದರ, ಫೆಬ್ರವರಿ.13 :- ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮಾರ್ಚ.14 ರಂದು ಬೀದರ ಜಿಲ್ಲೆಯಲ್ಲಿ ಬೃಹತ್ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಬಿ.ರಹಮಾನ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ, ಆಸ್ತಿಪಾಲು ವಿಭಾಗ, ಸಿವಿಲ್ ಪ್ರಕರಣಗಳು, ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ. ಆದ್ದರಿಂದ ಇದರ ಸದುಪಯೋಗವನ್ನು ಜಿಲ್ಲೆಯ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಹಿಂದೆ ದಿನಾಂಕ 13-12-2025 ರಂದು ರಾಷ್ಟ್ರೀಯ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಾಂತ ಒಟ್ಟು 46,116 ಪ್ರಕರಣಗಳನ್ನು ಲೋಕ ಆದಲಾತನಲ್ಲಿ ಇತ್ಯರ್ಥಗೊಳಿಸಲಾಗಿರುತ್ತದೆ. ಒಟ್ಟು 13,902 ಬಾಕಿ (ಪೇಂಡಿಂಗ) ಪ್ರಕರಣಗಳನ್ನು ಹಾಗೂ 32,214 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿರುತ್ತದೆ ಎಂದರು.
ಈ ಬಾರಿ ರಾಷ್ಟ್ರೀಯ ಲೋಕಅದಾಲತನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ(ಪೇಂಡಿಂಗ) ಇರುವ ರಾಜಿಯಾಗಬಹುದಾದ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಲು ಯೋಜನೆ ರೂಪಿಸಲಾಗಿದೆ. ಕಳೆದ ಲೋಕ ಅದಾಲತಗಿಂತ ಈ ಬಾರಿಯ ಲೋಕ ಅದಾಲತನಲ್ಲಿ ಹೆಚ್ಚು ಪ್ರಕರಣಗಳು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ದಿನಾಂಕ 12-02-2026 ಪ್ರಕಾರ ನಮ್ಮ ಜಿಲ್ಲೆಯಲ್ಲಿ ಒಟ್ಟು 29,547 ಪ್ರಕರಣಗಳು ಪೆಂಡಿಂಗ ಇದ್ದು. ಅವುಗಳಲ್ಲಿ ರಾಜಿಯಾಗಬಹುದಾದ ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನ ಮಾಡುವ ಗುರಿ ಹೊಂದಿದ್ದೇವೆ ಹಾಗೂ ಈ ಕುರಿತು ಎಲ್ಲಾ ಪೂರ್ವ ತಯ್ಯಾರಿ ಮಾಡಿಕೊಂಡಿರುತ್ತೇವೆ. ಜಿಲ್ಲೆಯಲ್ಲಿ ನಾವು ಒಟ್ಟು 18 ಲೋಕ ಅದಾಲತ ಬೇಂಚಗಳನ್ನು ನಾವು ರಚಿಸಿರುತ್ತೇವೆಂದರು.
ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ ಹಾಗೆ ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತದೆ.  ಕಾರಣ ಮಾರ್ಚ.14 ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಆದಾಲತ್ ನಡೆಯಲಿದ್ದು, ಜಿಲ್ಲೆಯ ಹೆಚ್ಚಿನ ಜನರು ಈ ಲೋಕ ಆದಾಲತ್‍ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೋಡೆ ಸೇರಿದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading