Popular Posts

ಮಹಾಶಿವರಾತ್ರಿ ಅಂಗವಾಗಿ ಸಾಮೂಹಿಕ ಇಷ್ಟಲಿಂಗ ಪೂಜೆ ಕರಪತ್ರ ಬಿಡುಗಡೆ

ಬೀದರ್:-ಮಹಾಶಿವರಾತ್ರಿ ಪ್ರಯುಕ್ತ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮದ ಕರಪತ್ರವನ್ನು ಫೆಬ್ರವರಿ 13, 2026ರಂದು ಸಂಜೆ 7 ಗಂಟೆಗೆ ಡಾ. ಚನ್ನಬಸವ ಪಟ್ಟದ್ದೇವರ ಪ್ರಸಾದ ನಿಲಯದಲ್ಲಿ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದ ಸಂಚಾಲಕರಾದ ಉಮಾಕಾಂತ್ ಮೀಸೆ ಮಾತನಾಡಿ, ನಾಡೋಜ ಪೂಜ್ಯಶ್ರೀ ಡಾ. ಬಸವಲಿಂಗ ಪಟ್ಟದ್ದೇವರ ದಿವ್ಯ ಮಾರ್ಗದರ್ಶನದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಫೆಬ್ರವರಿ 15, 2026 ಭಾನುವಾರ ಬೆಳಿಗ್ಗೆ 11:30ಕ್ಕೆ ಪೂಜ್ಯಶ್ರೀ ಮಹಾಲಿಂಗ ಸ್ವಾಮಿಗಳು ಸಾಮೂಹಿಕ ಇಷ್ಟಲಿಂಗ ಪೂಜೆಯ ಪ್ರಾತ್ಯಕ್ಷತೆ ನಡೆಸಲಿದ್ದಾರೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಬೀದರ್ ನಗರದ ಸಕಲ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಸಂಗ್ರಾಮ ಎಂಗಳೆ, ಶ್ರೀಕಾಂತ ಬಿರಾದರ್, ಭೀಮಾಶಂಕರ್ ಬಿರಾದರ್, ಶರಣಪ್ಪ ಖೇಡ್, ರಮೇಶ್ ಸ್ವಾಮಿ, ಮಹಾದೇವಿ ಟೀಚರ್, ತೀರ್ಥಮ್ಮ ರೆಡ್ಡಿ ಹಾಗೂ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading