1
1

ಕಲಬುರಗಿ,ಫೆ.17 ಕಲಬುರಗಿ ನಗರದ ಶರಣಬಸವೇಶ್ವರ ಕೆರೆ ಆವರಣದಲ್ಲಿ ಇದೇ ಫೆಬ್ರವರಿ 22 ಮತ್ತು 23 ರಂದು ಎರಡು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿದ್ದು, ಮಂಗಳವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತಮ್ಮ ಕಚೇರಿಯಲ್ಲಿ ಪೆÇೀಸ್ಟರ್ ಬಿಡುಗಡೆ ಮಾಡಿದರು.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶ್ರೀ ಶರಣಬಸವೇಶ್ವರ ಕೆರೆ ನಿರ್ವಹಣಾ ಪ್ರಾಧಿಕಾರ ಹಾಗೂ ತೋಟಗಾರಿಕೆ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಮತ್ತು ಮಾರಾಟ ಮೇಳ ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ.
ರೈತರು ಬೆಳೆದ ಹಣ್ಣು, ತರಕಾರಿಗಳಿಂದ ಭಾರತದ ಸಂವಿಧಾನ ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಇದಲ್ಲದೆ ರೈತರು ತಂತ್ರಜ್ಞಾನ ಸಹಾಯದಿಂದ ಯಶಸ್ವಿಯಾಗಿ ಬೆಳೆದ ಬೆಳೆಗಳು ಸಹ ಪ್ರದರ್ಶನಕ್ಕೆ ಲಭ್ಯವಿದೆ.
ರೈತರಿಂದ ಗ್ರಾಹಕರಿಗೆ ನೇರ ಮಾರಾಟ:ಮೇಳದಲ್ಲಿ ಸ್ಥಳೀಯವಾಗಿ ರೈತರು ಬೆಳೆದಿರುವ ವಿವಿಧ ಹಣ್ಣುಗಳ ಮಾರಾಟ ಮಾಡಲು ಸ್ಟಾಲ್ ಹಾಕಲಾಗುತ್ತಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ತಮ ತಾಜಾ ಹಣ್ಣುಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಿದೆ. ಇದಲ್ಲದೆ ತೋಟಗಾರಿಕೆ ಇಲಾಖೆಯ ವತಿಯಿಂದ ಅನುμÁ್ಠನಗೊಳಿಸಲಾಗುವ ವಿವಿಧ ಯೋಜನೆ, ಕಾರ್ಯಕ್ರಮಗಳು ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಕಲಬುರಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಾಬುರಾವ ಪಾಟೀಲ, ಕಚೇರಿ ಸಹಾಯಕ ಶರಣಗೌಡ ಇದ್ದರು.